ಕೃಷ್ಣ ಬೈರೇಗೌಡ
ಬೆಂಗಳೂರು: ಕುಂಭಮೇಳದಲ್ಲಿ ಕಾಲ್ತುಳಿತದಿಂದ ಮೃತರಾದವರು ಹಾಗೂ ಗಾಯಗೊಂಡವರ ಕುರಿತು ಉತ್ತರ ಪ್ರದೇಶ ಸರ್ಕಾರದಿಂದ ಅಧಿಕೃತ ಮಾಹಿತಿ ದೊರೆತಿಲ್ಲ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದರು.
ಸುದ್ದಿಗಾರರ ಜತೆ ಗುರುವಾರ ಮಾತನಾಡಿದ ಅವರು, ‘ಕರ್ನಾಟಕದ ಸಹಾಯವಾಣಿಗೆ ಬಂದ ಕರೆಗಳು, ಸಂತ್ರಸ್ತರ ಕುಟುಂಬದವರು ನೀಡಿದ ಮಾಹಿತಿ ಆಧಾರದಲ್ಲೇ ನೆರವಿಗೆ ಮುಂದಾಗಿದ್ದೇವೆ. ಅಲ್ಲಿನ ಮಾಹಿತಿ ಸಂಗ್ರಹಿಸಲು ಐಎಎಸ್ ಅಧಿಕಾರಿ ಬೋಯರ್ ಹರ್ಷಲ್ ನಾರಾಯಣ್‌ರಾವ್ ಅವರನ್ನು ಉತ್ತರ ಪ್ರದೇಶಕ್ಕೆ ಕಳುಹಿಸಿಕೊಡಲಾಗಿದೆ’ ಎಂದು ಮಾಹಿತಿ ನೀಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.