ADVERTISEMENT

‘ಮುಸ್ಲಿಮರಿಗೆ ಅನ್ಯಾಯವಾಗಿಲ್ಲ’

​ಪ್ರಜಾವಾಣಿ ವಾರ್ತೆ
Published 1 ಏಪ್ರಿಲ್ 2023, 18:48 IST
Last Updated 1 ಏಪ್ರಿಲ್ 2023, 18:48 IST
   

ಬೆಂಗಳೂರು: ‘ಮುಸ್ಲಿಮರ ಮೀಸಲಾತಿ ರದ್ದುಪಡಿಸಲಾಗಿದೆ ಎಂಬ ಕಾಂಗ್ರೆಸ್‌, ಜೆಡಿಎಸ್‌ ಆರೋಪದಲ್ಲಿ ಹುರುಳಿಲ್ಲ. ಮುಸ್ಲಿಮರನ್ನು ಶೇಕಡ 4ರಷ್ಟು ಮೀಸಲಾತಿ ಇದ್ದ ಪ್ರವರ್ಗದಿಂದ ಶೇ 10ರಷ್ಟು ಮೀಸಲಾತಿ ಇರುವ ಆರ್ಥಿಕವಾಗಿ ದುರ್ಬಲ ವರ್ಗಕ್ಕೆ ಸೇರಿಸಲಾಗಿದೆ. ಇದರಿಂದ ಮುಸ್ಲಿಮರಿಗೆ ಅನ್ಯಾಯವಾಗಿಲ್ಲ’ ಎಂದು ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

ಬಿಜೆಪಿ ರಾಜ್ಯ ಘಟಕದ ಕಚೇರಿಯಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ರಾಜ್ಯದಲ್ಲಿ ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ಪರಿಷ್ಕರಣೆ ನಡೆದಿದೆ. ಸಾಮಾಜಿಕ ನ್ಯಾಯಕ್ಕೆ ಪೂರಕವಾಗಿ ಈ ಪ್ರಕ್ರಿಯೆ ನಡೆದಿದೆ’ ಎಂದರು.

ನಿವೃತ್ತ ನ್ಯಾಯಮೂರ್ತಿ ಎ.ಜೆ. ಸದಾಶಿವ ಆಯೋಗದ ವರದಿಯನ್ನು ಪರಿಶೀಲಿಸಿ, ಒಳ ಮೀಸಲಾತಿ ಕಲ್ಪಿಸುವ ಕೆಲಸವನ್ನು ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ ಮಾಡಿರಲಿಲ್ಲ. ಆದರೆ, ಬಿಜೆಪಿ ಸರ್ಕಾರ ಆ ಕೆಲಸ ಮಾಡಿದೆ. ಸಾಮಾಜಿಕ ನ್ಯಾಯ ನೀಡಿದ ಬಿಜೆಪಿ ಸರ್ಕಾರವನ್ನು ಅವರು ಅಭಿನಂದಿಸದೇ ಇರಬಹುದು. ಆದರೆ, ವಾಸ್ತವ ಸಂಗತಿಯನ್ನು ಒಪ್ಪಿಕೊಳ್ಳಬೇಕಲ್ಲವೆ ಎಂದು ಅವರು ಪ್ರಶ್ನಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.