ADVERTISEMENT

ಮಹದಾಯಿಯಲ್ಲಿ ನ್ಯಾಯ ಸಿಕ್ಕಿಲ್ಲ, ಸುಪ್ರೀಂ ಮೊರೆ ಹೋಗಲು ನಿರ್ಧಾರ: ಶಿವಕುಮಾರ್

​ಪ್ರಜಾವಾಣಿ ವಾರ್ತೆ
Published 26 ಸೆಪ್ಟೆಂಬರ್ 2018, 4:38 IST
Last Updated 26 ಸೆಪ್ಟೆಂಬರ್ 2018, 4:38 IST
   

ಹುಬ್ಬಳ್ಳಿ: ಮಹದಾಯಿ ವಿಷಯದಲ್ಲಿ ರಾಜ್ಯಕ್ಕೆ ನ್ಯಾಯ ಸಿಕ್ಕಿಲ್ಲ, ಆದ್ದರಿಂದ ಸುಪ್ರೀಂ ಕೋರ್ಟ್ ಮೊರೆ ಹೋಗಲು ನಿರ್ಧರಿಸಲಾಗಿದೆ‌ ಎಂದು ಜಲಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್ ಹೇಳಿದರು.

ಕಣಕುಂಬಿಗೆ ತೆರಳುವ ಮುನ್ನ ಇಲ್ಲಿನ‌ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು "ತೀರ್ಪು ಬಂದ ದಿನದಿಂದಲೇ ನಾವು ಯೋಜನೆಗಳನ್ನು ರೂಪಿಸುತ್ತಿದ್ದೇವೆ. ಇದಕ್ಕಾಗಿ ಕಾನೂನು ತಜ್ಞರು ‌ಮತ್ತು ತಾಂತ್ರಿಕ‌ ತಜ್ಞರ ಜೊತೆ ನಿರಂತರ ಸಂಪರ್ಕದಲ್ಲಿದ್ದೇನೆ" ಎಂದರು.

ಕಾವೇರಿ ಬಗ್ಗೆ ಇರುವ ಕಾಳಜಿ ಮಹಾದಾಯಿಗೆ ಇಲ್ಲ ಎನ್ನುವುದು ಸತ್ಯಕ್ಕೆ ದೂರವಾದ‌ ಮಾತು.‌ ಮಹದಾಯಿ ಕುರಿತು ಚರ್ಚಿಸಲು ಮುಂದಿನ ‌ಕೆಲ‌ ದಿನಗಳಲ್ಲಿ ಸರ್ವ‌ಪಕ್ಷಗಳ‌ ಸಭೆ ಕರೆಯಲಾಗುವುದು ಎಂದು ಹೇಳಿದರು.

ADVERTISEMENT

ರಾಜ್ಯದ ಪಾಲಿನ ಒಂದೇ ಒಂದು ಹನಿ ನೀರನ್ನು ಸಮುದ್ರ ಸೇರಲು ಬಿಡುವುದಿಲ್ಲ, ಸಮ್ಮಿಶ್ರ ಸರ್ಕಾರದಲ್ಲಿ ಯಾವುದೇ ಭಿನ್ನಮತ ಇಲ್ಲ. ಮಾಧ್ಯಮದವರು ಇದರ ಬಗ್ಗೆ‌ ಇಲ್ಲ ಸಲ್ಲದ ವಿವಾದ ‌ಹುಟ್ಟು‌ಹಾಕುವುದು‌ ಬೇಡ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.