ADVERTISEMENT

ನಾಯಕತ್ವ ಬದಲಾವಣೆ ಇಲ್ಲ: ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ 

​ಪ್ರಜಾವಾಣಿ ವಾರ್ತೆ
Published 3 ಮೇ 2022, 8:20 IST
Last Updated 3 ಮೇ 2022, 8:20 IST
ಬಿಜೆಪಿ ಕರ್ನಾಟಕ ಉಸ್ತುವಾರಿ ಅರುಣ್ ಸಿಂಗ್
ಬಿಜೆಪಿ ಕರ್ನಾಟಕ ಉಸ್ತುವಾರಿ ಅರುಣ್ ಸಿಂಗ್   

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಬದಲಿಸುವ ಪ್ರಶ್ನೆಯೇ ಇಲ್ಲ. ಅವರು ಕಾಮನ್ ಮ್ಯಾನ್ ಸಿಎಂ ಎಂದು ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಹೇಳಿದರು.

ಮಂಗಳವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ಬೊಮ್ಮಾಯಿ ಉತ್ತಮ ಕೆಲಸ ಮಾಡುತ್ತಿದ್ದಾರೆ. ಅವರೇ ಮುಖ್ಯಮಂತ್ರಿ ಆಗಿ ಮುಂದುವರೆಯಬೇಕು ಎಂದು ಜನರೂ ಬಯಸಿದ್ದಾರೆ ಎಂದರು.

ಮುಂಬರುವ ವಿಧಾನಸಭಾ ಚುನಾವಣೆಯನ್ನು ಅವರ ನೇತೃತ್ವದಲ್ಲಿ ಎದುರಿಸಲಾಗುವುದು. ಮುಂದಿನ ಮುಖ್ಯಮಂತ್ರಿ ಅವರೇ ಆಗಲಿದ್ದಾರೆ ಎಂದರು.

ADVERTISEMENT

ಇದಕ್ಕೆ ಧ್ವನಿ ಗೂಡಿಸಿರುವ ಕಂದಾಯ ಸಚಿವ ಆರ್.ಅಶೋಕ, ಯಾವ ಕಾರಣಕ್ಕೂ ಬೊಮ್ಮಾಯಿ ಬದಲಾವಣೆ ಇಲ್ಲ. ನಾಯಕತ್ವ ಬದಲಾವಣೆ ಎಂಬುದು ಊಹಾಪೋಹಗಳು. ಆದ್ದರಿಂದ ಮುಖ್ಯಮಂತ್ರಿ ಬದಲಾವಣೆ ಕನಸು ಕಾಣುವ ಅಗತ್ಯವಿಲ್ಲ. ಬೊಮ್ಮಾಯಿ ಅವರಿಗೆ ಕೇಂದ್ರ ಮಾಯಕರ ಆಶೀರ್ವಾದ ಇದೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.