ತುಮಕೂರು: ‘ಆರೋಗ್ಯ ಇಲಾಖೆ ಸಿಬ್ಬಂದಿ ಭಾನುವಾರ ಕೆಲಸ ನಿರ್ವಹಿಸುವಂತೆ ಮಾಡಿ ಬೇರೆ ದಿನಗಳಲ್ಲಿ ರಜೆ ನೀಡುವ ಬಗ್ಗೆ ಚಿಂತನೆ ನಡೆದಿದೆ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿ, ‘ಭಾನುವಾರ ರಜೆ ಇರುವುದರಿಂದ ಚಿಕಿತ್ಸೆಗೆಂದು ಜನರು ಆಸ್ಪತ್ರೆಗಳಿಗೆ ಬರುತ್ತಾರೆ. ಆ ಸಮಯದಲ್ಲಿ ವೈದ್ಯರು ಸೇರಿದಂತೆ ಸಿಬ್ಬಂದಿ ರಜೆಯಲ್ಲಿದ್ದರೆ ಚಿಕಿತ್ಸೆ ಸಿಗುವುದು ಕಷ್ಟಕರವಾಗುತ್ತದೆ. ಹಾಗಾಗಿ, ರಜಾ ದಿನ ಬದಲಿಸಿ ಭಾನುವಾರದ ಬದಲು ಬೇರೆ ದಿನ ರಜೆ ನೀಡುವ ಬಗ್ಗೆ ಚಿಂತನೆ ಮಾಡಲಾಗಿದೆ’ ಎಂದರು.
‘ಚಾಣಕ್ಯ ವಿ.ವಿ.ಗೆ ಜಮೀನು ನೀಡಿರುವುದಕ್ಕೆ ಕಾಂಗ್ರೆಸ್‌ನವರು ವಿರೋಧ ವ್ಯಕ್ತಪಡಿಸುವುದು ಸರಿಯಲ್ಲ. ಅವರು ಅಧಿಕಾರದಲ್ಲಿ ಇದ್ದಾಗ ಎಷ್ಟು ಶಿಕ್ಷಣ ಸಂಸ್ಥೆಗಳಿಗೆ ಜಮೀನು ಕೊಟ್ಟಿದ್ದಾರೆ ಎಂಬುದು ಗೊತ್ತಿದೆ’ ಎಂದು ಹೇಳಿದರು.
ಬೇರೆಯವರು ಶಿಕ್ಷಣ ಸಂಸ್ಥೆ ತೆರೆದರೆ ಭೂಮಿ ನೀಡಲಾಗುವುದು ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.