ADVERTISEMENT

ರಾಜ್ಯದಲ್ಲಿ ಲಾಕ್‌ಡೌನ್ ಇಲ್ಲ: ಇಲ್ಲಿವೆ ಕೋವಿಡ್ 19 ಪರಿಶೀಲನಾ ಸಭೆಯ ಮುಖ್ಯಾಂಶಗಳು

​ಪ್ರಜಾವಾಣಿ ವಾರ್ತೆ
Published 17 ಜನವರಿ 2022, 13:34 IST
Last Updated 17 ಜನವರಿ 2022, 13:34 IST
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ   


ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ಕೋವಿಡ್ 19 ಕುರಿತ ಪರಿಶೀಲನಾ ಸಭೆ ನಡೆಯಿತು. ಸದ್ಯಕ್ಕೆ ಯಥಾಸ್ಥಿತಿ ಮುಂದುವರಿಸಲು ಸಭೆಯಲ್ಲಿ ನಿರ್ಧರಿಸಲಾಯಿತು. ವೀಕೆಂಡ್ ಕರ್ಫ್ಯೂ ಮುಂದುವರಿಸುವ ಕುರಿತಂತೆ ಶುಕ್ರವಾರದ ತುರ್ತು ಸಭೆಯಲ್ಲಿ ತೀರ್ಮಾನ ಕೈಗೊಳ್ಳಲು ನಿರ್ಧರಿಸಲಾಗಿದೆ. ಸಭೆಯ ಮುಖ್ಯಾಂಶಗಳು ಇಂತಿವೆ.

1. ಬೆಂಗಳೂರಿನಲ್ಲಿ ಒಪಿಡಿಗಳಿಗೆ ಹೆಚ್ಚಿನ ಗಮನ ಕೊಡಲು ಸೂಚಿಸಲಾಯಿತು.. ಹೆಚ್ಚು ಸಿಬ್ಬಂದಿ ನಿಯೋಜಿಸಲು ಸೂಚಿಸಿದರು.

2. ಜನ ಟ್ರಯಾಜಿಂಗ್‌ಗೆ ದಾಖಲಾಗುವುದನ್ನು ನಿಯಂತ್ರಿಸಲು ಸಲಹೆ ನೀಡಿದರು.

ADVERTISEMENT

3. ಹೋಮ್ ಐಸೊಲೇಷನ್ ಕಾಲ್ಸ್ ಹೆಚ್ಚಿಸಲು ಸೂಚಿಸಲಾಯಿತು. ಕೊ-ಮಾರ್ಬಿಡಿಟಿ ಇರುವವರಿಗೆ ದಿನಕ್ಕೆ ಒಂದು ಬಾರಿ ಕರೆ ಮಾಡಿ ಅವರ ಆರೋಗ್ಯ ಸ್ಥಿತಿ ಅವಲೋಕಿಸಬೇಕು ಹಾಗೂ ವಿಶ್ವಾಸ ಮೂಡಿಸಬೇಕು.

4. ಅಂತೆಯೆ ಮನೆಯವರಿಗೆ ಹರಡದಂತೆ ಕೈಗೊಳ್ಳಬೇಕಾದ ಮುನ್ನೆಚ್ಚರಿಕೆ ಕೈಗೊಳ್ಳಲು ಸೂಚಿಸಿದರು.

5. ಔಷಧಿ ಕಿಟ್‌ಗಳನ್ನು ಮನೆಗಳಿಗೆ ಪರಿಣಾಮಕಾರಿಯಾಗಿ ತಲುಪಿಸಲು ಸೂಚಿಸಿದರು.

6 ಸ್ವಯಂ ಸೇವಾ ಸಂಸ್ಥೆಗಳನ್ನು ತೊಡಗಿಸಿಕೊಂಡು ಕಾರ್ಯನಿರ್ವಹಿಸುವ ಮೂಲಕ ಜನರಲ್ಲಿರುವ ನಕಾರಾತ್ಮಕ ಮನೋಭಾವವನ್ನು ತೊಡೆಯಲು ಸಲಹೆ ನೀಡಿದರು.

7. ಸ್ಥಳೀಯ ವೈದ್ಯರು ಕನ್ಸಲ್ಟೇಷನ್ ಮಾಡುವಂತಾಗಬೆಕು.

8. ಸೋಂಕಿತ ಮಕ್ಕಳ ಕುರಿತು, ವಿಶೇಷವಾಗಿ ಗ್ರಾಮೀಣ ಪ್ರದೇಶದಲ್ಲಿ ಹೆಚ್ಚಿನ ಆದ್ಯತೆ ನೀಡಬೇಕು. ಪೋಷಕರಿಗೆ ಧೈರ್ಯ ಹೇಳಬೇಕು. ಔಷಧಿ ಕಿಟ್‌ಗಳನ್ನು ನೀಡಬೇಕು. ಮಕ್ಕಳಿಗೆ ಪ್ರತ್ಯೇಕ ಔಷಧಿ ಕಿಟ್ ಸಿದ್ಧಪಡಿಸಬೇಕು.

9. ಗ್ರಾಮೀಣ ಪ್ರದೇಶದಲ್ಲಿ ಜನರಲ್ಲಿ ವಿಶ್ವಾಸ ಮೂಡಿಸಬೇಕು.

10. ಆಕ್ಸಿಜನ್ ಪ್ಲಾಂಟ್‌ಗಳನ್ನು ಸಜ್ಜುಗೊಳಿಸಿ, ಸಿಬ್ಬಂದಿ, ಇಂಧನ ಮೊದಲಾದವುಗಳನ್ನು ಸಿದ್ಧವಿಟ್ಟುಕೊಳ್ಳಲು ಸೂಚಿಸಲಾಗಿದೆ.

11. ಆಸ್ಪತ್ರೆಗಳಲ್ಲಿ ಜನರೇಟರುಗಳ ವ್ಯವಸ್ಥೆ ಮಾಡಿಕೊಳ್ಳಲು ಸೂಚಿಸಿದರು.

12. ಮಕ್ಕಳು ಮತ್ತು 60 ವರ್ಷ ಮೇಲ್ಪಟ್ಟವರ ಕುರಿತು ಹೆಚ್ಚಿನ ನಿಗಾ ವಹಿಸಬೇಕು.

13. ಲಸಿಕೆ ಅಭಿಯಾನ ತ್ವರಿತವಾಗಿ ಪೂರ್ಣಗೊಳಿಸಲು ಸೂಚಿಸಿದರು.

14. ಔಷಧಿಗಳನ್ನು ಕೂಡಲೇ ಒದಗಿಸಬೇಕು. ಅವುಗಳನ್ನು ಸಕಾಲದಲ್ಲಿ ಆಸ್ಪತ್ರೆಗಳಿಗೆ ತಲುಪಿಸಲು ಕ್ರಮ ವಹಿಸಲು ಸೂಚಿಸಿದರು.

15. ಜನರು ಕೋವಿಡ್-ಸೂಕ್ತ ನಡವಳಿಕೆಯನ್ನು ಅನುಸರಿಸುವ ಬಗ್ಗೆ ಮಾಧ್ಯಮಗಳಲ್ಲಿ ಜಾಗೃತಿ ಮೂಡಿಸಲು ತೀರ್ಮಾನಿಸಲಾಯಿತು.

16. ಭಾರತ ಸರ್ಕಾರದ ನಿಯಮಾವಳಿಗಳಂತೆ ಐ.ಸಿ.ಎಂ.ಆರ್ ಸೂಚಿಸಿರುವ ಶ್ರೇಣೀಕೃತ ಮಾದರಿಯಲ್ಲಿ ಪರೀಕ್ಷೆ ನಡೆಸಲು ಅನುಸರಿಸಲು ಸೂಚಿಸಿದರು.

17. ಎರಡನೇ ಡೋಸ್ ಲಸಿಕೆ ಪಡೆದವರ ಸಂಖ್ಯೆ ಕಡಿಮೆ ಇರುವ ಜಿಲ್ಲೆಗಳ ಜಿಲ್ಲಾಧಿಕಾರಿ ಹಾಗೂ ಸಿಇಒ ಗಳೊಂದಿಗೆ ವಿಡಿಯೋ ಸಂವಾದ ನಡೆಸಲು ನಿರ್ಧರಿಸಲಾಯಿತು.

18. 15 ರಿಂದ 18 ವರ್ಷ ವಯೋಮಾನದವರಿಗೆ ಲಸಿಕಾ ಅಭಿಯಾನವನ್ನು ಚುರುಕುಗೊಳಿಸಲು ಸೂಚಿಸಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.