ADVERTISEMENT

ರಾಜ್ಯದಲ್ಲಿ ಮತ್ತೊಮ್ಮೆ ಲಾಕ್‌ಡೌನ್‌ ಇಲ್ಲ: ಬಿ.ಎಸ್. ಯಡಿಯೂರಪ್ಪ

​ಪ್ರಜಾವಾಣಿ ವಾರ್ತೆ
Published 6 ಏಪ್ರಿಲ್ 2021, 15:18 IST
Last Updated 6 ಏಪ್ರಿಲ್ 2021, 15:18 IST
   

ಬೆಳಗಾವಿ: ‘ರಾಜ್ಯದಲ್ಲಿ ಮತ್ತೊಮ್ಮೆ ಲಾಕ್‌ಡೌನ್‌ ಮಾಡುವ ಉದ್ದೇಶವಿಲ್ಲ’ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದರು.

ಇಲ್ಲಿ ಮಂಗಳವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ಕೋವಿಡ್ ಹರಡದಂತೆ ನೋಡಿಕೊಳ್ಳುವುದಕ್ಕಾಗಿ ಕೆಲವು ನಿರ್ಬಂಧಗಳನ್ನು ವಿಧಿಸಲಾಗಿದೆ’ ಎಂದರು.

‘ನೆರೆಯ ಮಹಾರಾಷ್ಟ್ರದಲ್ಲಿ ಕೋವಿಡ್ ಹೆಚ್ಚುತ್ತಿರುವುದು ಗಮನಕ್ಕೆ ಬಂದಿದೆ. ಆದ್ದರಿಂದ ಗಡಿ ಭಾಗಗಳಲ್ಲಿ ಹೆಚ್ಚಿನ ನಿಗಾ ವಹಿಸುವಂತೆ ನಿರ್ದೇಶನ ನೀಡಲಾಗಿದೆ. ಕಳ್ಳದಾರಿಯಲ್ಲಿ ಬರುವವರ ಮೇಲೂ ನಿಗಾ ಇಡಲಾಗುವುದು. ಪ್ರತಿಯೊಬ್ಬರೂ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಅಂತರ ಕಾಯ್ದುಕೊಳ್ಳಬೇಕು’ ಎಂದು ಹೇಳಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.