ADVERTISEMENT

ಆಲಮಟ್ಟಿ ಭೂಸ್ವಾಧೀನಕ್ಕೆ ಹಣವಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

​ಪ್ರಜಾವಾಣಿ ವಾರ್ತೆ
Published 11 ಜುಲೈ 2023, 21:57 IST
Last Updated 11 ಜುಲೈ 2023, 21:57 IST
ಡಿ.ಕೆ. ಶಿವಕುಮಾರ್
ಡಿ.ಕೆ. ಶಿವಕುಮಾರ್   

ಬೆಂಗಳೂರು: ಕೃಷ್ಣಾ ಮೇಲ್ದಂಡೆ ಯೋಜನೆಯ ಮೂರನೇ ಹಂತಕ್ಕಾಗಿ ಆಲಮಟ್ಟಿ ಜಲಾಶಯದಿಂದ ಭೂಮಿ ಕಳೆದುಕೊಳ್ಳಲಿರುವ ಸಂತ್ರಸ್ತರಿಗೆ ಪರಿಹಾರ ನೀಡಲು ಪ್ರಸಕ್ತ ಬಜೆಟ್‌ನಲ್ಲಿ ಹಣವಿಲ್ಲ. ಈ ಕುರಿತು ಅಧಿವೇಶನ ಮುಗಿಯುವುದರ ಒಳಗೆ ಆ ಭಾಗದ ಮುಖಂಡರ ಸಭೆ ಕರೆದು ಚರ್ಚಿಸಲಾಗುವುದು ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು.

ವಿಧಾನಪರಿಷತ್‌ನಲ್ಲಿ ಮಂಗಳವಾರ ಬಿಜೆಪಿಯ ಹಣಮಂತ ನಿರಾಣಿ ಅವರ ಗಮನಸೆಳೆಯುವ ಸೂಚನೆಗೆ ಉತ್ತರಿಸಿದ ಅವರು, ‘1.33 ಲಕ್ಷ ಎಕರೆ ಭೂಮಿಯ ಸ್ವಾಧೀನ ಮಾಡಬೇಕಾಗಿದೆ. ಪ್ರಸ್ತುತ 27 ಸಾವಿರ ಎಕರೆ ವಶಪಡಿಸಿಕೊಳ್ಳಲಾಗಿದೆ. ಬೊಮ್ಮಾಯಿ ಅವರು ಮಂಡಿಸಿದ್ದ ಬಜೆಟನ್ನೇ ಸ್ವಲ್ಪ ಮಾರ್ಪಾಡು ಮಾಡಿದ್ದೇವೆ. ಹಾಗಾಗಿ, ಉಳಿದ ಭೂಸ್ವಾಧೀನಕ್ಕೆ ಹಣ ನೀಡಲು ಸಾಧ್ಯವಿಲ್ಲ. ಭೂಸ್ವಾಧೀನ ದರ ಅಧಿಕವಾಗಿ ನಮೂದಿಸಿರುವುದೂ ಸಮಸ್ಯೆಗೆ ಕಾರಣ. ಕೇಂದ್ರ ಜಲಶಕ್ತಿ ಸಚಿವರನ್ನು ಈಚೆಗೆ ಭೇಟಿ ಮಾಡಿ ಬಾಕಿ ಇರುವ ಅಧಿಸೂಚನೆ ಹೊರಡಿಸಲು ಕೋರಿದ್ದೇವೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT