ADVERTISEMENT

ರಾಜ್ಯದಲ್ಲಿ ಲಾಕ್‌ಡೌನ್‌ ಮುಂದುವರಿಕೆ ಅಗತ್ಯವಿಲ್ಲ: ಸಚಿವ ಸುರೇಶ ಅಂಗಡಿ

​ಪ್ರಜಾವಾಣಿ ವಾರ್ತೆ
Published 24 ಜೂನ್ 2020, 13:07 IST
Last Updated 24 ಜೂನ್ 2020, 13:07 IST
ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ
ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ   

ಬೆಳಗಾವಿ: ‘ಕೊರೊನಾ ವೈರಾಣು ಜೊತೆ ನಾವು ಬದುಕಬೇಕಿದೆ. ಹೀಗಾಗಿ, ರಾಜ್ಯದಲ್ಲಿ ಲಾಕ್‍ಡೌನ್ ಮುಂದುವರಿಸಬೇಕಾದ ಅಗತ್ಯವಿಲ್ಲ’ ಎಂದು ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ ಹೇಳಿದರು.

ಇಲ್ಲಿ ಬುಧವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ಜನರನ್ನು ಹೆದರಿಸುವುದಕ್ಕಾಗಿಯೇ ಕೊರೊನಾ ವೈರಸ್ ಸೃಷ್ಟಿಸಿದ್ದಾರೆ. ದೇಶದಲ್ಲಿ ಆತಂಕ ಹುಟ್ಟಿಸಿದ್ದಾರೆ’ ಎಂದು ಪರೋಕ್ಷವಾಗಿ ಚೀನಾ ವಿರುದ್ಧ ವಾಗ್ದಾಳಿ ನಡೆಸಿದರು.

‘ಹಲವು ಸಾಂಕ್ರಾಮಿಕ ರೋಗಗಳು ದೇಶದಲ್ಲಿ ಬಂದಿವೆ, ಹೋಗಿವೆ. ಕೆಲವು ಕಾಯಿಲೆಗಳೊಂದಿಗೆ ನಾವು ಬದುಕುತ್ತಿದ್ದೇವೆ. ಕೋವಿಡ್–19 ಗುಣಮುಖವಾಗದಂಥ ರೋಗವೇನೂ ಅಲ್ಲ. ಆದರೆ, ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು. ಅಂತರ ಕಾಯ್ದುಕೊಳ್ಳಬೇಕು. ಮಾಸ್ಕ್‌ ಧರಿಸಬೇಕು ಹಾಗೂ ಸ್ವಚ್ಛತೆ ಕಾಪಾಡಿಕೊಳ್ಳಬೇಕು. ಮುನ್ನೆಚ್ಚರಿಕೆ ವಹಿಸಿದರೆ ಕೊರೊನಾ ಸೋಂಕಿತರು ಗುಣಮುಖವಾಗುತ್ತಾರೆ. ಹೀಗಾಗಿ, ಯಾರೂ ಆತಂಕ ಪಡಬೇಕಾಗಿಲ್ಲ’ ಎಂದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.