ADVERTISEMENT

ವಿದ್ಯುತ್ ಕಾಯ್ದೆಗೆ ತಿದ್ದುಪಡಿ ಬೇಡ: ಡಿ.ಕೆ.ಶಿವಕುಮಾರ್ ಒತ್ತಾಯ

​ಪ್ರಜಾವಾಣಿ ವಾರ್ತೆ
Published 28 ಮೇ 2020, 14:21 IST
Last Updated 28 ಮೇ 2020, 14:21 IST
ಡಿ.ಕೆ.ಶಿವಕುಮಾರ್
ಡಿ.ಕೆ.ಶಿವಕುಮಾರ್   

ಬೆಂಗಳೂರು: ‘ಉದ್ದೇಶಿತ ವಿದ್ಯುತ್ ತಿದ್ದುಪಡಿ ಕಾಯ್ದೆಯಿಂದ ಭಾರಿ ತೊಂದರೆ ಇದೆ. ಸರ್ಕಾರ ಮತ್ತೊಂದು ತಪ್ಪು ನಿರ್ಧಾರ ಕೈಗೊಳ್ಳುತ್ತಿದೆ. ಪಕ್ಷದ ಹಿರಿಯ ನಾಯಕರ ಜತೆ ಚರ್ಚೆ ಮಾಡಿ ಮುಂದಿನ ಹೋರಾಟದ ಬಗ್ಗೆ ರೂಪುರೇಷೆಗಳನ್ನು ಸಿದ್ಧಪಡಿಸಲಾಗುವುದು’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದರು.

‘ಸರ್ಕಾರ ಮನಸೋಇಚ್ಛೆ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಿದೆ. ಅವರು ಮಾಡುವ ಎಲ್ಲಾ ಚಟುವಟಿಕೆಗಳನ್ನು ನಾವು ಗಮನಿಸುತ್ತಿದ್ದೇವೆ. ಯಾವುದಕ್ಕೂ ನಮ್ಮ ಅಭಿಪ್ರಾಯ ಕೇಳಲಿಲ್ಲ. ಏನು ಮಾಡುತ್ತಾರೋ ಮಾಡಲಿ, ವಿರೋಧ ಪಕ್ಷವಾಗಿ ನಾವೂ ಕೂಡ ಸಭೆ ಮಾಡಿ ಚರ್ಚಿಸುತ್ತೇವೆ. ಮುಂದೆ ಯಾವ ರೀತಿಯ ನಿಲುವು ತಾಳಬೇಕು ಎಂಬುದರ ಬಗ್ಗೆ ಶೀಘ್ರವಾಗಿ ತಿಳಿಸುತ್ತೇವೆ’ ಎಂದು ಅವರು ಬುಧವಾರ ಇಲ್ಲಿ ಸುದ್ದಿಗಾರರಿಗೆ ತಿಳಿಸಿದರು.

‘ರಾಜ್ಯದಲ್ಲಿ ದೇವಸ್ಥಾನಗಳನ್ನು ತೆರೆಯುವ ಬಗ್ಗೆ ಸರ್ಕಾರ ನಿರ್ಧಾರ ತೆಗೆದುಕೊಳ್ಳುತ್ತಿದೆ. ಅದರ ಪರಿಣಾಮಗಳಿಗೆ ಸರ್ಕಾರವೇ ಹೊಣೆ’ ಎಂದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.