ADVERTISEMENT

ವಿದ್ಯುತ್ ಸಂಪರ್ಕಕ್ಕೆ ಒ.ಸಿ ಬೇಕಿಲ್ಲ

​ಪ್ರಜಾವಾಣಿ ವಾರ್ತೆ
Published 2 ಜುಲೈ 2022, 19:07 IST
Last Updated 2 ಜುಲೈ 2022, 19:07 IST
   

ಬೆಂಗಳೂರು: ವಿದ್ಯುತ್ ಸಂಪರ್ಕ ಪಡೆಯಲು ಇನ್ನು‌ ಮುಂದೆ ಗುರುತಿನ ಚೀಟಿ ಮತ್ತು ಸ್ವತ್ತಿನ ಹಕ್ಕುಪತ್ರ ಇದ್ದರೆ ಸಾಕು. ‘ಸ್ವಾಧೀನಾನುಭವ ಪ್ರಮಾಣಪತ್ರ’ (ಒ.ಸಿ) ಕಡ್ಡಾಯ ಎಂಬ ನಿಯಮವನ್ನು ರಾಜ್ಯ ಸರ್ಕಾರ ತೆಗೆದು ಹಾಕಿದೆ. ಈ ಸಂಬಂಧ ನಗರಾಭಿವೃದ್ಧಿ ಇಲಾಖೆ ಹೊರಡಿಸಿದ ತಿದ್ದುಪಡಿ ಆದೇಶವನ್ನು ರಾಜ್ಯಪತ್ರದಲ್ಲಿ ಪ್ರಕಟಿಸಲಾಗಿದೆ.

‘ಈ ಆದೇಶದಿಂದ ಬಿಬಿಎಂಪಿ ವ್ಯಾಪ್ತಿಯಲ್ಲಿ ಸುಮಾರು ಐದು ಲಕ್ಷ ಕುಟುಂಬಗಳಿಗೆ ಅನುಕೂಲ ಆಗಲಿದೆ. ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಜಾರಿಗೆ ಬಂದಿದ್ದ ಈ ‘ಕತ್ತಲೆ ಭಾಗ್ಯ’ದ ನಿಯಮವನ್ನು ನಮ್ಮ ಸರ್ಕಾರ ಬದಲಾಯಿಸಿದೆ. ಇದ
ರಿಂದ ಎಲ್ಲರ ಮನೆಯಲ್ಲೂ ಬೆಳಕು ಮೂಡಲಿದೆ’ ಎಂದು ಇಂಧನ ಸಚಿವ ವಿ.ಸುನಿಲ್ ಕುಮಾರ್ ಟ್ವೀಟ್ ಮಾಡಿದ್ದಾರೆ.

ನಿರ್ಮಾಣ ಸಂದರ್ಭದಲ್ಲಿ ನಿಯಮ ಉಲ್ಲಂಘಿಸಿದ ಮನೆ, ವಸತಿ ಸಮುಚ್ಚಯಗಳಿಗೆ ಬಿಬಿಎಂಪಿ ಸ್ವಾಧೀನಾನುಭವಪ್ರಮಾಣಪತ್ರ ನೀಡಲು ನಿರಾಕರಿಸಿದ್ದರೆ ಅಂತಹ ಮನೆ ಹಾಗೂ ಫ್ಲಾಟ್‌ಗಳಿಗೆ ವಿದ್ಯುತ್ ಸಂಪರ್ಕ ನೀಡದಂತೆ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಆದೇಶ ಹೊರಡಿಸಲಾಗಿತ್ತು. ಇದರಿಂದ ಹಲವು ಕುಟುಂಬಗಳು ವಿದ್ಯುತ್ ಸಂಪರ್ಕ ಪಡೆಯಲು ವಿಫಲವಾಗಿದ್ದವು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.