ಜಿ. ಪರಮೇಶ್ವರ
ಬೆಂಗಳೂರು: ‘ನಿಲುಗಡೆ ನಿಷೇಧಿತ (ನೋ ಪಾರ್ಕಿಂಗ್) ಸ್ಥಳಗಳಲ್ಲಿ ನಿಲ್ಲಿಸುವ ವಾಹನಗಳನ್ನು ಕೊಂಡೊಯ್ಯುವ ಟೋಯಿಂಗ್ ಕಾರ್ಯಾಚರಣೆಯನ್ನು ಶೀಘ್ರವೇ ಆರಂಭಿಸಲಾಗುವುದು’ ಎಂದು ಗೃಹ ಸಚಿವ ಜಿ. ಪರಮೇಶ್ವರ ತಿಳಿಸಿದರು.
ಸುದ್ದಿಗಾರರ ಜೊತೆ ಗುರುವಾರ ಮಾತನಾಡಿದ ಅವರು, ‘ನಗರದ ಕೆಲವು ರಸ್ತೆಗಳಲ್ಲಿ ನಿಷೇಧವಿದ್ದರೂ ವಾಹನಗಳನ್ನು ನಿಲ್ಲಿಸುತ್ತಿರುವುದರಿಂದ ಸಂಚಾರ ದಟ್ಟಣೆ ಆಗುತ್ತಿದೆ. ಈ ಬಗ್ಗೆ ಜನಜಾಗೃತಿ ಮೂಡಿಸಿದರೂ ಸಮಸ್ಯೆ ಬಗೆಹರಿದಿಲ್ಲ’ ಎಂದರು.
‘ಟೋಯಿಂಗ್ ಸಂಬಂಧ ಈ ಹಿಂದೆ ಗುತ್ತಿಗೆ ನೀಡಲಾಗಿತ್ತು. ಈ ಬಾರಿ ಬೆಂಗಳೂರು ನಗರ ಪೊಲೀಸರೇ ಟೋಯಿಂಗ್ ಮಾಡುತ್ತಾರೆ. ಖಾಸಗಿಯವರಿಗೆ ಗುತ್ತಿಗೆ ನೀಡುವುದಿಲ್ಲ’ ಎಂದ ಅವರು, ‘ಜನ ಓಡಾಡಲು ರಸ್ತೆ ನಿರ್ಮಿಸಲಾಗಿದೆಯೇ ಹೊರತು, ವಾಹನಗಳ ನಿಲುಗಡೆಗೆ ಅಲ್ಲ’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.