ADVERTISEMENT

‘ಖಾಸಗಿ ಕೃಷಿ ವಿಶ್ವವಿದ್ಯಾಲಯ, ಕಾಲೇಜುಗಳಿಗೆ ಅವಕಾಶ ಇಲ್ಲ’

​ಪ್ರಜಾವಾಣಿ ವಾರ್ತೆ
Published 4 ಜುಲೈ 2018, 19:20 IST
Last Updated 4 ಜುಲೈ 2018, 19:20 IST

ಬೆಂಗಳೂರು: ಖಾಸಗಿ ಕೃಷಿ ವಿಶ್ವವಿದ್ಯಾಲಯ ಮತ್ತು ಕಾಲೇಜುಗಳಿಗೆ ಅವಕಾಶ ನೀಡುವುದಿಲ್ಲ ಎಂದು ರಾಜ್ಯ ಸರ್ಕಾರ ಸ್ಪಷ್ಟಪಡಿಸಿದೆ.

ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ ವಿಧಾನಪರಿಷತ್ತಿನಲ್ಲಿ ಮಾತನಾಡಿ, ಖಾಸಗಿಯವರು ಕೃಷಿ ವಿಶ್ವವಿದ್ಯಾಲಯ ಮತ್ತು ಕೃಷಿ ಕಾಲೇಜು ಆರಂಭಿಸುವುದನ್ನು ತಡೆಯಲು ಶೀಘ್ರವೇ ಖಾಸಗಿ ವಿಶ್ವವಿದ್ಯಾಲಯಗಳ ಕಾಯ್ದೆಗೆ ತಿದ್ದುಪಡಿ ಮಾಡಲಾಗುವುದು ಎಂದರು.

ಬಿಜೆಪಿಯ ಎನ್‌.ರವಿಕುಮಾರ್‌ ಪ್ರಶ್ನೆಗೆ ಉತ್ತರಿಸಿದ ಅವರು,ಈ ಸಂಬಂಧ ಈಗಾಗಲೇ ಕೃಷಿ ಸಚಿವರ ಜತೆ ಮಾತುಕತೆ ನಡೆಸಲಾಗಿದೆ ಎಂದರು.

ADVERTISEMENT

ಈ ವಿಷಯಕ್ಕೆ ಸಂಬಂಧಿಸಿದಂತೆ ಬೆಂಗಳೂರು, ಧಾರವಾಡ ಮತ್ತು ರಾಯಚೂರು ಕೃಷಿ ವಿಶ್ವವಿದ್ಯಾಲಯ, ಕೃಷಿ ಕಾಲೇಜುಗಳ ವಿದ್ಯಾರ್ಥಿಗಳು ಹಲವು ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದಾರೆ. ತಕ್ಷಣವೇ ಸರ್ಕಾರ ಮಧ್ಯ ಪ್ರವೇಶಿಸಿ ಸೂಕ್ತ ಕ್ರಮ ತೆಗೆದುಕೊಳ್ಳಬೇಕು ಎಂದು ರವಿಕುಮಾರ್‌ ಆಗ್ರಹಿಸಿದರು.

ದೊಡ್ಡಬಳ್ಳಾಪುರದ ಕೃಷಿ ವಿಶ್ವವಿದ್ಯಾಲಯವು ಎಲ್ಲ ನಿಯಮಗಳನ್ನು ಗಾಳಿಗೆ ತೂರಿದೆ ಎಂದು ದೂರಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.