ADVERTISEMENT

ಡಿಕೆಶಿ ಭೇಟಿ ಹಿಂದೆ ರಾಜಕೀಯ ಉದ್ದೇಶ ಇಲ್ಲ, ನಾನು ಬಿಜೆಪಿ ಬಿಡಲ್ಲ: ಆನಂದ್ ಸಿಂಗ್‌

​ಪ್ರಜಾವಾಣಿ ವಾರ್ತೆ
Published 3 ಫೆಬ್ರುವರಿ 2022, 10:20 IST
Last Updated 3 ಫೆಬ್ರುವರಿ 2022, 10:20 IST
ಆನಂದ್ ಸಿಂಗ್‌
ಆನಂದ್ ಸಿಂಗ್‌   

ಬೆಂಗಳೂರು: ನಾನು ಯಾವುದೇ ಕಾರಣಕ್ಕೂ ಬಿಜೆಪಿ ಬಿಡುವುದಿಲ್ಲ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಭೇಟಿ ಹಿಂದೆ ಯಾವುದೇ ರಾಜಕೀಯ ಉದ್ದೇಶ ಇರಲಿಲ್ಲ ಎಂದು ಪ್ರವಾಸೋದ್ಯಮ ಸಚಿವ ಆನಂದ್ ಸಿಂಗ್‌ ಹೇಳಿದ್ದಾರೆ.

ಗುರುವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಭೇಟಿಯ ಬಳಿಕ ಸುದ್ದಿಗಾರರ ಜತೆ ಮಾತನಾಡಿದರು. ಕೆಲವರು ಸುಖಾಸುಮ್ಮನೆ ವದಂತಿಗಳನ್ನು ಹರಡುತ್ತಿದ್ದಾರೆ ಎಂದರು.

ಹಿಂದೆ ವಿಜಯನಗರದಲ್ಲಿ ತುಂಗಾರತಿ ಮಾಡಲಾಗುತ್ತಿತ್ತು. ಅದೇ ಮಾದರಿಯಲ್ಲಿ ಕಾವೇರಿಯಲ್ಲಿ ನಡೆಸುವ ಬಗ್ಗೆ ಡಿ.ಕೆ.ಶಿವಕುಮಾರ್‌ ಮಾಹಿತಿ ಕೇಳಿ ಮನೆಗೆ ಬರುವುದಾಗಿ ಹೇಳಿದ್ದರು. ನನಗಿಂತ ಹಿರಿಯರಾದ ಅವರು ಮನೆಗೆ ಬರುವುದು ಬೇಡ, ನಾನೇ ನಿಮ್ಮ ಮನೆಗೆ ಬರುತ್ತೇನೆ ಎಂದು ಅವರ ಮನೆಗೆ ಹೋಗಿದ್ದೆ ಎಂದು ಹೇಳಿದರು.

ADVERTISEMENT

ಕಾಂಗ್ರೆಸ್‌ನಲ್ಲಿ ಸರಿ ಹೋಗುತ್ತಿಲ್ಲ ಎಂಬ ಕಾರಣಕ್ಕೆ ಆ ಪಕ್ಷ ಬಿಟ್ಟು ಬಿಜೆಪಿ ಸೇರಿದೆವು. ಮತ್ತೆ ಅಲ್ಲಿಗೆ ಹೋಗುವ ಪ್ರಶ್ನೆಯೇ ಇಲ್ಲ. ಮುಖ್ಯಮಂತ್ರಿಯವರು ಜನಪರ ಕೆಲಸಗಳನ್ನು ಮಾಡಿಕೊಂಡು ಹೋಗುತ್ತಿದ್ದಾರೆ. ನನಗೆ ತೃಪ್ತಿ ಇದೆ. ಈ ಎಲ್ಲ ವಿಷಯಗಳ ಬಗ್ಗೆ ಮುಖ್ಯಮಂತ್ರಿಯವರಿಗೆ ಮಾಹಿತಿ ನೀಡಿದ್ದೇನೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.