ADVERTISEMENT

ವಿಪತ್ತು ನಿರ್ವಹಣೆ ಯೋಜನೆ ಸಿದ್ಧಪಡಿಸಿಲ್ಲ: ಹೈಕೋರ್ಟ್‌ಗೆ ಮಾಹಿತಿ

​ಪ್ರಜಾವಾಣಿ ವಾರ್ತೆ
Published 18 ಮಾರ್ಚ್ 2021, 18:59 IST
Last Updated 18 ಮಾರ್ಚ್ 2021, 18:59 IST
ಹೈಕೋರ್ಟ್
ಹೈಕೋರ್ಟ್   

ಬೆಂಗಳೂರು: ‘2020–21ನೇ ಸಾಲಿನ ರಾಜ್ಯ ವಿಪತ್ತು ನಿರ್ವಹಣಾ ಯೋಜನೆಯನ್ನು ರಾಜ್ಯ ಮಟ್ಟದ ಕಾರ್ಯಕಾರಿ ಸಮಿತಿ ಸಿದ್ಧಪಡಿಸಿಲ್ಲ. ಆದರೆ, ಕಂದಾಯ ಇಲಾಖೆ ಯೋಜನೆ ತಯಾರಿಸಿದೆ’ ಎಂದು ಹೈಕೋರ್ಟ್‌ಗೆ ರಾಜ್ಯ ಸರ್ಕಾರ ಮಾಹಿತಿ ನೀಡಿದೆ.

‘ವಿಪತ್ತು ನಿರ್ವಹಣಾ ಕಾಯ್ದೆಯ ಸೆಕ್ಷನ್ 23ರ ಪ್ರಕಾರ ರಾಜ್ಯ ಮಟ್ಟದ ಕಾರ್ಯಕಾರಿ ಸಮಿತಿಯೇ ಯೋಜನೆ ಸಿದ್ಧಪಡಿಸಬೇಕು. ಈ ಕೆಲಸವನ್ನು ಕಂದಾಯ ಇಲಾಖೆಗೆ ವರ್ಗಾಯಿಸಲು ಕಾಯ್ದೆಯಲ್ಲಿ ಅವಕಾಶ ಇಲ್ಲ’ ಎಂದು ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ ಅಭಿಪ್ರಾಯಪಟ್ಟಿದೆ.

‘ಕಾನೂನಿನ ಪ್ರಕಾರ ಸಿದ್ಧವಾಗದ ಈ ಯೋಜನೆಯನ್ನು ಕಾರ್ಯಕಾರಿ ಸಮಿತಿ ಪರಿಶೀಲಿಸಿ ನವೀಕರಿಸುತ್ತದೆಯೇ, ಇಲ್ಲವೇ ಎಂಬುದರ ಬಗ್ಗೆ ಹೇಳಿಕೆ ಸಲ್ಲಿಸಬೇಕು’ ಎಂದು ಸರ್ಕಾರಕ್ಕೆ ನಿರ್ದೇಶನ ನೀಡಿತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.