
ಪ್ರಜಾವಾಣಿ ವಾರ್ತೆ.jpeg?w=900&q=70&auto=format,compress)
ಆಹಾರ ಧಾನ್ಯ
(ಸಾಂದರ್ಭಿಕ ಚಿತ್ರ)
ನವದೆಹಲಿ: ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ (ಪಿಡಿಎಸ್) ಆಹಾರ ಧಾನ್ಯಗಳ ಹೆಚ್ಚುವರಿ ಹಂಚಿಕೆಗಾಗಿ ಕರ್ನಾಟಕ ಸರ್ಕಾರದಿಂದ ಯಾವುದೇ ಪ್ರಸ್ತಾವನೆ ಸಲ್ಲಿಕೆಯಾಗಿಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ.
ಲೋಕಸಭೆಯಲ್ಲಿ ಬುಧವಾರ ಪ್ರಶ್ನೋತ್ತರ ಅವಧಿಯಲ್ಲಿ ಬಿಜೆಪಿಯ ಗೋವಿಂದ ಕಾರಜೋಳ ಕೇಳಿರುವ ಪ್ರಶ್ನೆಗೆ ಗ್ರಾಹಕ ವ್ಯವಹಾರ ಹಾಗೂ ಆಹಾರ ಸಚಿವರು ಈ ಉತ್ತರ ನೀಡಿದ್ದಾರೆ.
ಕರ್ನಾಟಕ ಸರ್ಕಾರವು ಈಗಾಗಲೇ ಅನುಮತಿಸಿರುವ ಮಿತಿಯವರೆಗೆ ಫಲಾನುಭವಿಗಳನ್ನು ಗುರುತಿಸಿದೆ ಮತ್ತು ಅದರ ಉದ್ದೇಶಿತ ವ್ಯಾಪ್ತಿಯ ಶೇ 100 ಅನ್ನು ಸಾಧಿಸಿದೆ ಎಂದು ಅವರು ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.