ADVERTISEMENT

‘ಬಜೆಟ್‌ನಲ್ಲಿ ಲೋಕಾಯುಕ್ತದ ಪ್ರಸ್ತಾಪವಿಲ್ಲ’

​ಪ್ರಜಾವಾಣಿ ವಾರ್ತೆ
Published 5 ಜುಲೈ 2018, 20:02 IST
Last Updated 5 ಜುಲೈ 2018, 20:02 IST
s
s   

ಬೆಂಗಳೂರು: ಲೋಕಾಯುಕ್ತ ಸಂಸ್ಥೆಯನ್ನು ಪುನರುಜ್ಜೀವನಗೊಳಿಸಿ, ಅದರ ಗತ ವೈಭವವನ್ನು ಮರಳಿ ಸ್ಥಾಪಿಸುವುದಾಗಿ ಪಕ್ಷದ ಪ್ರಣಾಳಿಕೆಯಲ್ಲಿ ಭರವಸೆ ನೀಡಿದ್ದ ಕುಮಾರಸ್ವಾಮಿ ತಮ್ಮ ಬಜೆಟ್‌ನಲ್ಲಿ ಈ ಬಗ್ಗೆ ಚಕಾರವೆತ್ತಿಲ್ಲ.

ಲೋಕಾಯುಕ್ತ ಸಂಸ್ಥೆಯನ್ನು ದುರ್ಬಲಗೊಳಿಸಲೆಂದೇ ಹುಟ್ಟಿಕೊಂಡ ಭ್ರಷ್ಟಾಚಾರ ನಿಗ್ರಹ ದಳವನ್ನು (ಎಸಿಬಿ) ರದ್ದು‍ ಮಾಡುವುದಾಗಿ ಜೆಡಿಎಸ್‌ ಪ್ರಣಾಳಿಕೆಯಲ್ಲಿ ಹೇಳಲಾಗಿತ್ತು.

‘ಲೋಕಾಯುಕ್ತ ಪೊಲೀಸರು ಸದ್ಯ ಲೋಕಾಯುಕ್ತರ ಅಧೀನಕ್ಕೆ ಒಳಪಟ್ಟಿಲ್ಲ. ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯಡಿ ದಾಳಿ ನಡೆಸಲು ಈ ಪೊಲೀಸರು ಅವರ ಪೂರ್ವಾನುಮತಿ ಪಡೆಯುವಂತಿಲ್ಲ. ಹೀಗಾಗಿ, ತಾವು ಅಧಿಕಾರಕ್ಕೆ ಬಂದರೆ ಲೋಕಾಯುಕ್ತಕ್ಕೆ ಸ್ವತಂತ್ರ ಸಿಬ್ಬಂದಿ ಹಾಗೂ ಪೊಲೀಸರನ್ನು ನೀಡಲಾಗುವುದು’ ಎಂದು ಕುಮಾರಸ್ವಾಮಿ ಆಶ್ವಾಸನೆ ನೀಡಿದ್ದರು.

ADVERTISEMENT

ಆದರೆ, ಎಸಿಬಿಯನ್ನು ಸ್ಥಾಪಿಸಿದ್ದು ಹಿಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ. ಹೀಗಾಗಿ, ಕಾಂಗ್ರೆಸ್‌ ಒತ್ತಡಕ್ಕೆ ಕುಮಾರಸ್ವಾಮಿ ಶರಣಾದರೇ ಎಂಬ ಅನುಮಾನ ಹುಟ್ಟಿಕೊಂಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.