ADVERTISEMENT

ಕರ್ನಾಟಕದಿಂದ ಯಾರೂ ಪ್ರಧಾನಿ ಆಗುವುದಿಲ್ಲ: ಸಿದ್ದರಾಮಯ್ಯ

ಬೆಂಗಳೂರು ಪ್ರೆಸ್‌ಕ್ಲಬ್ ಸೋಮವಾರ ಹಮ್ಮಿಕೊಂಡಿದ್ದ ಮಾಧ್ಯಮ ಸಂವಾದದಲ್ಲಿ ಪ್ರಶ್ನೆಯೊಂದಕ್ಕೆ ಅವರು ಉತ್ತರಿಸಿದರು.

​ಪ್ರಜಾವಾಣಿ ವಾರ್ತೆ
Published 20 ಮೇ 2024, 16:13 IST
Last Updated 20 ಮೇ 2024, 16:13 IST
ಸಿದ್ದರಾಮಯ್ಯ
ಸಿದ್ದರಾಮಯ್ಯ   

ಬೆಂಗಳೂರು: ‘ಕರ್ನಾಟಕದಿಂದ ಯಾರೂ ಪ್ರಧಾನಿ ಆಗುವುದಿಲ್ಲ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಬೆಂಗಳೂರು ಪ್ರೆಸ್‌ಕ್ಲಬ್ ಸೋಮವಾರ ಹಮ್ಮಿಕೊಂಡಿದ್ದ ಮಾಧ್ಯಮ ಸಂವಾದದಲ್ಲಿ ಪ್ರಶ್ನೆಯೊಂದಕ್ಕೆ ಅವರು ಉತ್ತರಿಸಿದರು.

‘ಕರ್ನಾಟಕ ಸರ್ಕಾರದ ಗ್ಯಾರಂಟಿ ಯೋಜನೆಗಳ ಮಾದರಿ ಆಧಾರದಲ್ಲಿ ಇಂಡಿಯಾ ಮೈತ್ರಿಕೂಟ ಚುನಾವಣೆ ಎದುರಿಸುತ್ತಿರುವುದರಿಂದ ಬಹುಮತ ಬಂದರೆ ನೀವು ಪ್ರಧಾನಿ ಆಗುತ್ತೀರಾ’ ಎಂದ ಪ್ರಶ್ನೆ ಮುಖ್ಯಮಂತ್ರಿಗೆ ಎದುರಾಯಿತು.

ADVERTISEMENT

‘ಬಹುಮತ ದೊರಕಿದರೆ ಇಂಡಿಯಾ ಮೈತ್ರಿಕೂಟ ಪ್ರಧಾನಿಯನ್ನು ನಿರ್ಧರಿಸುತ್ತದೆ. ಕರ್ನಾಟಕದಿಂದ ಯಾರೂ ಆಗುವುದಿಲ್ಲ’ ಎಂದಷ್ಟೇ ಹೇಳಿದರು.

‘ಲೋಕಸಭಾ ಚುನಾವಣಾ ಫಲಿತಾಂಶ ಪ್ರಕಟವಾದ ಬಳಿಕ ಸಂಪುಟ ಪುನರ್‌ರಚನೆ ಆಗಲಿದೆಯೆ’ ಎಂಬ ಪ್ರಶ್ನೆಗೆ,  ‘ಸಂಪುಟ ಪುನರ್‌ರಚನೆ ಪ್ರಸ್ತಾವ ಸದ್ಯ ತಮ್ಮ ಮುಂದಿಲ್ಲ. ಆ ರೀತಿ ಯಾವುದೇ ಚರ್ಚೆಯೂ ನಡೆದಿಲ್ಲ. ಆ ರೀತಿಯ ಆಲೋಚನೆ ಇಲ್ಲ. ನಮ್ಮದು ಹೈಕಮಾಂಡ್‌ ನಿರ್ಧಾರದಂತೆ ನಡೆಯುವ ಪಕ್ಷ. ಹೈಕಮಾಂಡ್‌ ಯಾವ ಸೂಚನೆ ನೀಡುತ್ತದೆಯೊ ಆ ರೀತಿ ಮಾಡುತ್ತೇವೆ’ ಎಂದರು.

‘ಭ್ರಷ್ಟಾಚಾರ ತೊಲಗಿದೆ ಎನ್ನುವುದಿಲ್ಲ’: ‘ಬಿಜೆಪಿ ನೇತೃತ್ವದ ಹಿಂದಿನ ಸರ್ಕಾರದ ವಿರುದ್ಧ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಡಿ. ಕೆಂಪಣ್ಣ ಶೇಕಡ 40ರಷ್ಟು ಕಮಿಷನ್‌ ಆರೋಪ ಮಾಡಿದ್ದರು. ಆ ಬಗ್ಗೆ ತನಿಖೆಗೆ ಆಯೋಗ ನೇಮಿಸಿದ್ದೇವೆ. ನಮ್ಮ ಸರ್ಕಾರದಲ್ಲಿ ಭ್ರಷ್ಟಾಚಾರ ಸಂಪೂರ್ಣ ತೊಲಗಿದೆ ಎಂದು ನಾನು ಹೇಳುವುದಿಲ್ಲ’ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಭ್ರಷ್ಟಾಚಾರವನ್ನು ತಗ್ಗಿಸುವ ಪ್ರಯತ್ನವನ್ನು ತಮ್ಮ ಸರ್ಕಾರ ಮಾಡುತ್ತಿದೆ. ಒಂದೇ ಬಾರಿಗೆ ಭ್ರಷ್ಟಾಚಾರ ನಿರ್ಮೂಲನೆ ಸಾಧ್ಯವಿಲ್ಲ. ಹಂತ ಹಂತವಾಗಿ ಆ ಕೆಲಸ ಆಗಬೇಕು ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.