ADVERTISEMENT

ತಪಾಸಣೆಗೆ ಒಳಗಾಗಿ, ಜೀವಕ್ಕಿಂತ ಯಾವ ಧರ್ಮವೂ ದೊಡ್ಡದಲ್ಲ: ಎಚ್.ಡಿ. ಕುಮಾರಸ್ವಾಮಿ

​ಪ್ರಜಾವಾಣಿ ವಾರ್ತೆ
Published 2 ಏಪ್ರಿಲ್ 2020, 13:30 IST
Last Updated 2 ಏಪ್ರಿಲ್ 2020, 13:30 IST
ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ
ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ   

ಬೆಂಗಳೂರು: ದೆಹಲಿಯ ನಿಜಾಮುದ್ದೀನ್ ಧಾರ್ಮಿಕ ಸಭೆಯಲ್ಲಿ ಭಾಗವಹಿಸಿದವರೆಲ್ಲರೂ ಕಡ್ಡಾಯವಾಗಿ ಸ್ವಯಂಪ್ರೇರಿತರಾಗಿ ವೈದ್ಯಕೀಯ ತಪಾಸಣೆಗೆ ಒಳಗಾಗಬೇಕು. ಜೀವಕ್ಕಿಂತ ಯಾವ ಧರ್ಮವೂ ದೊಡ್ಡದಲ್ಲ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ತಿಳಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, ತಪಾಸಣೆ ಮಾಡಲು ಬಂದ ವೈದ್ಯಕೀಯ ಸಿಬ್ಬಂದಿಯ ಮೇಲೆ ಹಲ್ಲೆ ಮಾಡುವುದು, ತಿರುಗಿ ಬೀಳುವುದು ಖಂಡನೀಯ. ದೇಶದ ಸ್ವಾಸ್ಥ್ಯ ಮತ್ತು ಸಂವಿಧಾನಕ್ಕಿಂತ ಯಾರೂ ದೊಡ್ಡವರಲ್ಲ ಎಂದಿದ್ದಾರೆ.

ಬೆಂಗಳೂರಿನ ಹೆಗಡೆ‌ನಗರದ ಬಳಿ ಬರುವ ಸಾಧಿಕ್‌ನಗರದಲ್ಲಿ ಆಶಾ ಕಾರ್ಯಕರ್ತೆಯರು ತಪಾಸಣೆ ಮಾಡುವ ವೇಳೆ‌ ಯುವಕರು ಗುಂಪಾಗಿ ಸೇರಿ ಅಸಭ್ಯವಾಗಿ ವರ್ತಿಸಿ ಹಲ್ಲೆ ಮಾಡಿದ್ದು, ಇವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.
ರಾಷ್ಟ್ರದ ಹಿತಾಸಕ್ತಿ ವಿರುದ್ಧ ಯಾರೂ ಧ್ವನಿ ಎತ್ತಬಾರದು. ಅತಿರೇಕದ ವರ್ತನೆಗಳಿಗೆ ಖಂಡಿತಾ ನನ್ನ ಬೆಂಬಲವಿಲ್ಲ. ಇದು ಜಾತಿ-ಧರ್ಮಗಳ ಪ್ರಶ್ನೆಯಲ್ಲ. ರಾಷ್ಟ್ರದ ಭವಿಷ್ಯದ ಪ್ರಶ್ನೆ ಎಂದು ತಿಳಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.