ADVERTISEMENT

ಪ್ರತ್ಯೇಕ ಪ್ರವೇಶ ಪರೀಕ್ಷೆ ನಡೆಸೆವು: ಸಚಿವ ಜಿ.ಟಿ.ದೇವೇಗೌಡ

​ಪ್ರಜಾವಾಣಿ ವಾರ್ತೆ
Published 26 ಅಕ್ಟೋಬರ್ 2018, 18:04 IST
Last Updated 26 ಅಕ್ಟೋಬರ್ 2018, 18:04 IST
ಜಿ.ಟಿ.ದೇವೇಗೌಡ
ಜಿ.ಟಿ.ದೇವೇಗೌಡ   

ಮೈಸೂರು: ವಿಶ್ವವಿದ್ಯಾಲಯ ಅನುದಾನ ಆಯೋಗ (ಯುಜಿಸಿ) ದ ನಿಯಾಮವಳಿಗೆ ವಿರುದ್ಧವಾಗಿ ಬೋಧಕ ಸಿಬ್ಬಂದಿ ನೇಮಕಕ್ಕಾಗಿ ಪ್ರತ್ಯೇಕ ಪ್ರವೇಶ ಪರೀಕ್ಷೆ ನಡೆಸುವುದಿಲ್ಲ ಎಂದು ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ ಸ್ಪಷ್ಟಪಡಿಸಿದ್ದಾರೆ.

ಈ ಹಿಂದಿನ ಸರ್ಕಾರದ ಅವಧಿಯಲ್ಲಿ ರಾಜ್ಯದ ವಿವಿಧ ವಿಶ್ವವಿದ್ಯಾಲಯಗಳಲ್ಲಿ ಈ ರೀತಿ ಪ್ರವೇಶ ಪರೀಕ್ಷೆಗಳನ್ನು ನಡೆಸಲಾಗಿದೆ. ಆದರೆ, ಇನ್ನು ಮುಂದೆ ಆ ರೀತಿ ನಡೆಯದು. ರಾಷ್ಟ್ರೀಯ ಪ್ರವೇಶ ಪರೀಕ್ಷೆ (ಎನ್‌ಇಟಿ) ಅಥವಾ ರಾಜ್ಯ ಮಟ್ಟದ ಪ್ರವೇಶ ಪರೀಕ್ಷೆ (ಎಸ್‌ಎಲ್‌ಇಟಿ) ಪರೀಕ್ಷೆಯ ಅಂಕಗಳನ್ನು ಆಧರಿಸಿ ನೇಮಕಾತಿ ನಡೆಸಲಾಗುವುದು ಎಂದು ಅವರು ತಿಳಿಸಿದ್ದಾರೆ.

ವಿಶ್ವವಿದ್ಯಾಲಯಗಳು ಪ್ರತ್ಯೇಕ ಪರೀಕ್ಷೆ ನಡೆಸಿದರೆ ಅಕ್ರಮವಾಗುವ ಸಾಧ್ಯತೆಗಳಿವೆ ಎಂಬ ಆರೋಪ ಕೇಳಿಬಂದಿತ್ತು. ಅಲ್ಲದೇ, ‘ಯುಜಿಸಿ’ ನಿಯಮಾವಳಿಗಳಿಗೆ ವಿರುದ್ಧವಾಗಿ ಪರೀಕ್ಷೆಗಳನ್ನು ನಡೆಸಿದರೆ ‘ಯುಜಿಸಿ’ಯ ಕೆಂಗಣ್ಣಿಗೆ ಗುರಿಯಾಗಬೇಕಾಗುವುದು ಎಂದು ಶಿಕ್ಷಣ ತಜ್ಞರು ಕಿವಿಮಾತು ಹೇಳಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಈ ತೀರ್ಮಾನ ತೆಗೆದುಕೊಂಡಿದೆ ಎನ್ನಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.