ADVERTISEMENT

ಧರ್ಮಸ್ಥಳ ಪ್ರಕರಣ | SIT ತಂಡದಿಂದ ಯಾವ ಅಧಿಕಾರಿಗಳೂ ಹಿಂದೆ ಸರಿದಿಲ್ಲ: ಪರಮೇಶ್ವರ

​ಪ್ರಜಾವಾಣಿ ವಾರ್ತೆ
Published 21 ಜುಲೈ 2025, 15:30 IST
Last Updated 21 ಜುಲೈ 2025, 15:30 IST
<div class="paragraphs"><p>ಜಿ. ಪರಮೇಶ್ವರ, ಗೃಹ ಸಚಿವ</p></div>

ಜಿ. ಪರಮೇಶ್ವರ, ಗೃಹ ಸಚಿವ

   

ಬೆಂಗಳೂರು: ‘ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಹಿಂದೆ ನಡೆದಿದೆ ಎನ್ನಲಾದ ಅಪರಾಧ ಕೃತ್ಯಗಳಿಗೆ ಸಂಬಂಧಿಸಿದ ಪ್ರಕರಣಗಳ ಸಮಗ್ರ ತನಿಖೆಗೆ ರಚಿಸಿರುವ ವಿಶೇಷ ತನಿಖಾ ತಂಡದಿಂದ (ಎಸ್‌ಐಟಿ) ಯಾವ ಅಧಿಕಾರಿಗಳೂ ಹಿಂದೆ ಸರಿದಿಲ್ಲ’ ಎಂದು ಗೃಹ ಸಚಿವ ಜಿ. ಪರಮೇಶ್ವರ ತಿಳಿಸಿದರು.

ಎಸ್‌ಐಟಿ ತಂಡದಿಂದ ಕೆಲವು ಅಧಿಕಾರಿಗಳು ವೈಯಕ್ತಿಕ ಕಾರಣಕ್ಕೆ ಹೊರಗುಳಿಯಲಿದ್ದಾರೆ ಎಂಬ ವದಂತಿಗಳ ಕುರಿತು ಸುದ್ದಿಗಾರರ ಜೊತೆ ಸೋಮವಾರ ಮಾತನಾಡಿದ ಅವರು, ‘ಆ ರೀತಿಯ ಯಾವುದೇ ಬೆಳವಣಿಗೆ ನಡೆದಿಲ್ಲ. ತಂಡದಲ್ಲಿ ಇರುವವರು ಜವಾಬ್ದಾರಿಯುತ ಸ್ಥಾನದಲ್ಲಿರುವ ಹಿರಿಯ ಅಧಿಕಾರಿಗಳು. ಅವರು ತಮ್ಮ ಕೆಲಸವನ್ನು ಮಾಡುತ್ತಾರೆ. ತಾವು ಬರುವುದಿಲ್ಲ ಎಂದು ಅವರು ನನಗಾಗಲಿ, ಸರ್ಕಾರಕ್ಕಾಗಲಿ ಹೇಳಿಲ್ಲ’ ಎಂದು ಸ್ಪಷ್ಟಪಡಿಸಿದರು.

ADVERTISEMENT

ಮೊಹಾಂತಿ ಭೇಟಿ: ಸದಾಶಿವನಗರದಲ್ಲಿರುವ ಪರಮೇಶ್ವರ ಅವರ ನಿವಾಸಕ್ಕೆ ಸೋಮವಾರ ಬೆಳಿಗ್ಗೆ ತೆರಳಿದ ಎಸ್‌ಐಟಿ ಮುಖ್ಯಸ್ಥ ಪ್ರಣವ ಮೊಹಾಂತಿ ಅವರು ಕೆಲಹೊತ್ತು ಚರ್ಚೆ ನಡೆಸಿದರು. ‘ಜವಾಬ್ದಾರಿಯಿಂದ ಪ್ರಕರಣಗಳ ತನಿಖೆ ಮಾಡುವುದಾಗಿ ಮೊಹಾಂತಿ ಹೇಳಿದ್ದಾರೆ’ ಎಂದು ಪರಮೇಶ್ವರ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.