ADVERTISEMENT

ಅವಧಿಪೂರ್ವ ಚುನಾವಣೆ ಬಗ್ಗೆ ಸದ್ಯ ಚಿಂತನೆ ಇಲ್ಲ: ಯಡಿಯೂರಪ್ಪ

​ಪ್ರಜಾವಾಣಿ ವಾರ್ತೆ
Published 30 ಮಾರ್ಚ್ 2022, 17:44 IST
Last Updated 30 ಮಾರ್ಚ್ 2022, 17:44 IST
ಬಿ.ಎಸ್. ಯಡಿಯೂರಪ್ಪ
ಬಿ.ಎಸ್. ಯಡಿಯೂರಪ್ಪ   

ಮೈಸೂರು: ‘ರಾಜ್ಯದಲ್ಲಿಅವಧಿಗೂ ಮುಂಚಿತವಾಗಿ ರಾಜ್ಯ ವಿಧಾನಸಭೆಗೆ ಚುನಾವಣೆ ನಡೆಯುವ ಸೂಚನೆಗಳಿಲ್ಲ’ ಎಂದು ಬಿಜೆಪಿ ಶಾಸಕ ಬಿ.ಎಸ್‌.ಯಡಿಯೂರಪ್ಪ ಹೇಳಿದ್ದಾರೆ.

‘ಅಮಿತ್ ಶಾ ಅವರು ರಾಜ್ಯಕ್ಕೆ ಬಂದ ನಂತರ ಅವಧಿಪೂರ್ವ ಚುನಾವಣೆ ಘೋಷಣೆಯಾಗುತ್ತದೆ ಎಂಬ ಬಗ್ಗೆ ನನಗೆ ಗೊತ್ತಿಲ್ಲ. ಅಂಥ ‌ಬೆಳವಣಿಗೆಗಳು ಇದ್ದಲ್ಲಿ ತಿಳಿಸುವೆ’ ಎಂದು ಇಲ್ಲಿನ ಸುತ್ತೂರು ಮಠದಲ್ಲಿ ಬುಧವಾರ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದರು.

‘ಏಪ್ರಿಲ್ 1ರ ನಂತರ ಮೂರರಿಂದ ನಾಲ್ಕು ತಂಡಗಳಲ್ಲಿ ರಾಜ್ಯ ಪ್ರವಾಸ ಮಾಡುವೆ.ಬಸವರಾಜ ಬೊಮ್ಮಾಯಿ ನಾಯಕತ್ವದಲ್ಲೇ ಮುಂಬರುವ ಚುನಾವಣೆ ನಡೆಯುತ್ತದೆ. 140 ಸ್ಥಾನ ಗೆಲ್ಲುವುದು ನಿಶ್ಚಿತ’ ಎಂದು ಪ್ರತಿಪಾದಿಸಿದರು.

ADVERTISEMENT

‘ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಅಲ್ಪಸಂಖ್ಯಾತರು ಬಿಜೆಪಿ ಪರವಾಗಿಯೇ ಇದ್ದಾರೆ. ಮುಂದೆಯೂ ಅವರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಹೋಗುತ್ತೇವೆ’ ಎಂದರು.

‘ಬಿ.ವೈ.ವಿಜಯೇಂದ್ರ ಸಂಪುಟ ಸೇರ್ಪಡೆ ಬಗ್ಗೆ ನಾನು ಯಾರ ಜೊತೆಗೂ ಚರ್ಚೆ ಮಾಡಿಲ್ಲ’ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.