ADVERTISEMENT

ನೋಬೆಲ್ ಪುರಸ್ಕೃತರಿಂದ ‘ಗ್ಯಾರಂಟಿ’ ಯೋಜನೆಗಳ ಪರಿಣಾಮ ಅಧ್ಯಯನ

ಭರತ್ ಜೋಶಿ
Published 31 ಆಗಸ್ಟ್ 2023, 0:17 IST
Last Updated 31 ಆಗಸ್ಟ್ 2023, 0:17 IST
ಸಿದ್ದರಾಮಯ್ಯ ಅವರು ಗೃಹಲಕ್ಷ್ಮೀಯರತ್ತ ಕೈಬೀಸಿದರು
ಸಿದ್ದರಾಮಯ್ಯ ಅವರು ಗೃಹಲಕ್ಷ್ಮೀಯರತ್ತ ಕೈಬೀಸಿದರು   

ಬೆಂಗಳೂರು: ಸಿದ್ದರಾಮಯ್ಯ ಸರ್ಕಾರ ಜಾರಿಗೆ ತಂದಿರುವ ಐದು ಗ್ಯಾರಂಟಿ ಯೋಜನೆಗಳ ಪರಿಣಾಮಗಳನ್ನು ಅಧ್ಯಯನ ನಡೆಸಲು ನೊಬೆಲ್ ಪ್ರಶಸ್ತಿ ಪುರಸ್ಕೃತ ಅಭಿಜಿತ್‌ ಬ್ಯಾನರ್ಜಿ ಮತ್ತು ಎಸ್ತರ್‌ ಡಫ್ಲೊ ಸಹ ಸ್ಥಾಪಕರಾಗಿರುವ ಸಂಶೋಧನಾ ಸಂಸ್ಥೆ ಪರಿಶೀಲನೆ ನಡೆಸಿದೆ.

ಅಲ್ಲದೇ, ರಾಜ್ಯ ಸರ್ಕಾರದ ವಿತ್ತೀಯ ಕಾರ್ಯನೀತಿ ಸಂಸ್ಥೆಯು ಐದು ಗ್ಯಾರಂಟಿಗಳ ಜಾರಿಯ ಪರಿಣಾಮಗಳನ್ನು ಮೌಲ್ಯಮಾಪನ ನಡೆಸಲಿದೆ ಎಂದು ಹಣಕಾಸು ಇಲಾಖೆ ಹೆಚ್ಚುವರಿ ಕಾರ್ಯದರ್ಶಿ ಎಲ್‌.ಕೆ.ಅತೀಕ್‌ ಅವರು ‘ಪ್ರಜಾವಾಣಿ’ಗೆ ತಿಳಿಸಿದರು.

ಈ ಸಂಬಂಧ ರಾಜ್ಯ ಸರ್ಕಾರ ಅಭಿಜಿತ್ ಬ್ಯಾನರ್ಜಿ ಮತ್ತು ಡಫ್ಲೊ ಸೇರಿ ಆರಂಭಿಸಿರುವ ಅಬ್ದುಲ್‌ ಲತೀಫ್‌ ಜಮೀಲ್ ಪವರ್ಟಿ ಆ್ಯಕ್ಷನ್‌ ಲ್ಯಾಬ್‌ (ಜೆ–ಪಾಲ್) ಸಂಸ್ಥೆಯನ್ನು ಸಂಪರ್ಕಿಸಿದ್ದು, ಇದಕ್ಕೆ ಸಂಸ್ಥೆಯು ಒಪ್ಪಿಗೆ ನೀಡಿದೆ. ಇವರಿಬ್ಬರ ಜತೆಗೆ ಶಿಕಾಗೋ ಬೂತ್‌ನ ಸೆಂತಿಥಿ ಮುಲೈನಾಥನ್‌ ಅವರೂ ಐದು ಗ್ಯಾರಂಟಿಗಳ ಬಗ್ಗೆ ಅಧ್ಯಯನ ನಡೆಸಲು ಆಸಕ್ತಿ ತೋರಿಸಿದ್ದಾರೆ.

ADVERTISEMENT

ಅಭಿಜಿತ್ ಬ್ಯಾನರ್ಜಿ ಅವರು 2019 ರ ಲೋಕಸಭೆ ಚುನಾವಣೆ ವೇಳೆ ಕಾಂಗ್ರೆಸ್‌ ಪಕ್ಷಕ್ಕೆ ‘ನ್ಯಾಯ್’ ಯೋಜನೆ ರೂಪಿಸಿದರು. ಇದರಡಿ ಕಾಂಗ್ರೆಸ್ ಪ್ರತಿ ಬಡ ಕುಟುಂಬಗಳಿಗೆ ₹6,000 ನೀಡುವ ಆಶ್ವಾಸನೆಯನ್ನು ಪ್ರಕಟಿಸಿತ್ತು. 

ಆದರೆ, ಲೋಕಸಭಾ ಚುನಾವಣೆಯಲ್ಲಿ ‘ನ್ಯಾಯ್‌’ ಯೋಜನೆಯಿಂದ ಕಾಂಗ್ರೆಸ್‌ ಪಕ್ಷಕ್ಕೆ ಯಾವುದೇ ಲಾಭವಾಗಲಿಲ್ಲ. ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಗ್ಯಾರಂಟಿ ಯೋಜನೆಗಳು ಕಾಂಗ್ರೆಸ್‌ ಪಕ್ಷ ಅಭೂತಪೂರ್ವ ವಿಜಯ ಸಾಧಿಸಲು ಕಾರಣವಾಗಿದೆ ಎಂದು ನಂಬಲಾಗಿದೆ. 

ಇನ್ನು ಕೆಲವೇ ತಿಂಗಳಲ್ಲಿ ಉದ್ದೇಶಿತ ಅಧ್ಯಯನ ಆರಂಭವಾಗಲಿದೆ ಎಂದೂ ಅವರು ಹೇಳಿದರು. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.