ಎಚ್. ವಿಶ್ವನಾಥ್ (ಸಂಗ್ರಹ ಚಿತ್ರ)
ಬೆಂಗಳೂರು: ವಿಧಾನಪರಿಷತ್ ಬಿಜೆಪಿ ಸದಸ್ಯ ಎಚ್. ವಿಶ್ವನಾಥ್ ಅವರು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಬುಧವಾರ ಭೇಟಿ ಮಾಡಿ ಚರ್ಚೆ ನಡೆಸಿದರು.
ಬಳಿಕ ಮಾತನಾಡಿದ ವಿಶ್ವನಾಥ್, ‘ಶಿವಕುಮಾರ್ ಅವರು ಮುಖ್ಯಮಂತ್ರಿ ಆಗುವುದನ್ನು ಯಾರೂ ತಪ್ಪಿಸಲು ಆಗುವುದಿಲ್ಲ’ ಎಂದರು.
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಮುಖ್ಯಮಂತ್ರಿ ಆಪ್ತರು ಒತ್ತಾಯಿಸುತ್ತಿರುವ ಬಗ್ಗೆ ಕೇಳಿದ ಪ್ರಶ್ನೆಗೆ, ‘ಇದು ಅನವಶ್ಯಕವಾಗಿ ಮುಖ್ಯಮಂತ್ರಿ ಹಬ್ಬಿಸುತ್ತಿರುವ ಗೋಜಲು. ಕಾಂಗ್ರೆಸ್ ಪಕ್ಷದ ಹೆಸರು ಮತ್ತು ವರ್ಚಸ್ಸು ಹಾಳು ಮಾಡುತ್ತಿದ್ದಾರೆ. ಇವರೇನು ಕಾಂಗ್ರೆಸ್ ಕಟ್ಟಿದವರಲ್ಲವಲ್ಲ. ಅವರದ್ದು ಮುಗಿಯಿತಲ್ಲ. ಅವರಿಗೆ ಇನ್ನೇನಾಗಬೇಕು’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.