ADVERTISEMENT

ಶಾಸಕ ಅನಿಲ ಬೆನಕೆ ಬಂಧನಕ್ಕೆ ವಾರೆಂಟ್

​ಪ್ರಜಾವಾಣಿ ವಾರ್ತೆ
Published 2 ಜೂನ್ 2022, 20:15 IST
Last Updated 2 ಜೂನ್ 2022, 20:15 IST

ಬೆಳಗಾವಿ: ಕಳೆದ ವಿಧಾನಸಭೆ ಚುನಾ
ವಣೆ ವೇಳೆ ನೀತಿ ಸಂಹಿತೆ ಉಲ್ಲಂಘಿಸಿದ ಆರೋಪದ ಮೇಲೆ, ಶಾಸಕ ಅನಿಲ ಬೆನಕೆ ವಿರುದ್ಧ, ಗುರುವಾರ ಜಾಮೀನು ರಹಿತ ಬಂಧನ ವಾರೆಂಟ್ ಜಾರಿ ಮಾಡಲಾಗಿದೆ.

2018ರ ವಿಧಾನಸಭೆ ಚುನಾವಣೆ ವೇಳೆ ಶಾಸಕರ ವಿರುದ್ಧ ಬೆಳಗಾವಿಯ ಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯ ಬಂಧನ ವಾರೆಂಟ್ ಹೊರಡಿಸಿದೆ. ಜೂನ್ 27ರಂದು ಆರೋಪಿಯನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲು ಆದೇಶಿಸಿದೆ. ಈ ಹಿಂದೆ ಐದು ಬಾರಿ ವಾರೆಂಟ್ ಜಾರಿ ಮಾಡಿದರೂ ಶಾಸಕ ನ್ಯಾಯಾಲಯಕ್ಕೆ ಹಾಜರಾಗಿಲ್ಲ. ಮಾರ್ಕೆಟ್ ಠಾಣೆ ಪೊಲೀಸರಿಗೆ ವಾರೆಂಟ್ ವೈಫಲ್ಯದ ಕಾರಣ ನೀಡಲೂ ತಿಳಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT