ADVERTISEMENT

ನೊರೊ ವೈರಸ್‌: ಗಡಿ ಜಿಲ್ಲೆಗಳಲ್ಲಿ ಮುನ್ನೆಚ್ಚರಿಕೆಗೆ ಸೂಚನೆ

​ಪ್ರಜಾವಾಣಿ ವಾರ್ತೆ
Published 23 ನವೆಂಬರ್ 2021, 16:30 IST
Last Updated 23 ನವೆಂಬರ್ 2021, 16:30 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೆಂಗಳೂರು:ಕೇರಳದ ವಯನಾಡ್‌ ಜಿಲ್ಲೆಯಲ್ಲಿ ಸಾಂಕ್ರಾಮಿಕ ನೊರೊ ವೈರಸ್‌ ಪ್ರಕರಣಗಳು ದೃಢಪಟ್ಟಿರುವುದರಿಂದ ರಾಜ್ಯದ ಗಡಿ ಜಿಲ್ಲೆಗಳಲ್ಲಿ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸೂಚಿಸಿದೆ.

‘ವಯನಾಡ್‌ ಜಿಲ್ಲೆಯ ಪೂಕೊಡೆ ಪಶುವೈದ್ಯಕೀಯ ಕಾಲೇಜಿನ 13 ವಿದ್ಯಾರ್ಥಿಗಳಲ್ಲಿ ವೈರಾಣು ದೃಢಪಟ್ಟಿದೆ. ಹೀಗಾಗಿ, ದಕ್ಷಿಣ ಕನ್ನಡ ಹಾಗೂ ಕೊಡಗಿನಲ್ಲಿ ಈ ಬಗ್ಗೆ ಎಚ್ಚರವಹಿಸಬೇಕು.ಸಾಮಾನ್ಯವಾಗಿ ಕಲುಷಿತ ನೀರು ಹಾಗೂ ಆಹಾರದಿಂದ ಈ ವೈರಾಣು ಹರಡುತ್ತದೆ.ವಾಂತಿ, ಅತಿಸಾರ ಮತ್ತು ಹೊಟ್ಟೆನೋವು ಸೋಂಕಿನ ಪ್ರಮುಖ ಲಕ್ಷಣಗಳಾಗಿವೆ. ಈ ಲಕ್ಷಣಗಳು ಕಾಣಿಸಿಕೊಂಡಲ್ಲಿ ತಕ್ಷಣ ಆಸ್ಪತ್ರೆಗೆ ತೆರಳಿ, ಚಿಕಿತ್ಸೆ ಪಡೆದುಕೊಳ್ಳಬೇಕು. ಇಲ್ಲವಾದಲ್ಲಿ ಮಾರಣಾಂತಿಕವಾಗಲಿದೆ. ರೋಗ ಲಕ್ಷಣಗಳನ್ನು ಆಧರಿಸಿ ಈ ರೋಗಕ್ಕೆ ಚಿಕಿತ್ಸೆ ನೀಡಲಾಗುತ್ತದೆ ಎಂದು ಇಲಾಖೆಯ ಸಹ ನಿರ್ದೇಶಕರು ತಿಳಿಸಿದ್ದಾರೆ.

‘ಕುಡಿಯುವ ನೀರಿನ ಮೂಲಗಳ ಮಾದರಿಗಳನ್ನು ಸಂಗ್ರಹಿಸಿ, ವಿಶ್ಲೇಷಣೆ ಮಾಡಬೇಕು. ಸೋಂಕು ಹರಡದಂತೆತಡೆಯುವ ನಿಟ್ಟಿನಲ್ಲಿ, ಕ್ಲೋರಿನೇಶನ್‌ ಸೇರಿದಂತೆ ಹಲವು ಕ್ರಮಗಳನ್ನು ಕೈಗೊಳ್ಳಬೇಕು. ಜನ ಕಡಿಮೆ ಇರುವ ಪ್ರದೇಶಗಳಲ್ಲಿರುವ ಹೋಟೆಲ್ ಹಾಗೂ ಕ್ಯಾಂಟೀನ್‌ಗಳಲ್ಲೂ ಬಿಸಿ ನೀರು ಸರಬರಾಜು ಮಾಡಲು ಹೋಟೆಲ್ ಮಾಲೀಕರಿಗೆ ಕಟ್ಟುನಿಟ್ಟಾದ ಸೂಚನೆ ನೀಡಬೇಕು’ ಎಂದು ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ಸೂಚಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.