ADVERTISEMENT

ಕಲ್ಯಾಣ, ಉತ್ತರ ಕರ್ನಾಟಕ ಆರ್ಯ ಈಡಿಗ ಸಮಾವೇಶ ಇಂದು

​ಪ್ರಜಾವಾಣಿ ವಾರ್ತೆ
Published 24 ಜುಲೈ 2021, 16:44 IST
Last Updated 24 ಜುಲೈ 2021, 16:44 IST

ಗಂಗಾವತಿ (ಕೊಪ್ಪಳ ಜಿಲ್ಲೆ): ಉತ್ತರ ಕರ್ನಾಟಕ ಹಾಗೂ ಕಲ್ಯಾಣ ಕರ್ನಾಟಕದ ಆರ್ಯ ಈಡಿಗ ಸಮುದಾಯದ ಚಿಂತನ-ಮಂಥನ ಸಮಾವೇಶವನ್ನು ಜು.25ರಂದು ಬೆಳಿಗ್ಗೆ 10.30ಕ್ಕೆ ಇಲ್ಲಿಯ ಶ್ರೀಕ್ಷೇತ್ರ ಹೇಮಗುಡ್ಡದ ದುರ್ಗಾ ದೇವಸ್ಥಾನದ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ.

ಕರ್ನಾಟಕ ಪ್ರದೇಶ ಆರ್ಯ ಈಡಿಗ ಸಂಘದ ರಾಜ್ಯ ಘಟಕದ ಅಧ್ಯಕ್ಷ ತಿಮ್ಮೇಗೌಡ ಅವರು ಸಮಾವೇಶದ ಅಧ್ಯಕ್ಷತೆ ವಹಿಸಲಿದ್ದು, ಸಚಿವ ಕೋಟ ಶ್ರೀನಿವಾಸ ಪೂಜಾರಿ ಸಮಾರಂಭ ಉದ್ಘಾಟಿಸುವರು. ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷ ಮಾಲೀಕಯ್ಯ ಗುತ್ತೇದಾರ, ಪ್ರಣವಾನಂದ ಸ್ವಾಮೀಜಿ ಪಾಲ್ಗೊಳ್ಳುವರು. ಈ ಭಾಗದ ಸಮಾಜದ3 ಸಾವಿರಕ್ಕೂ ಹೆಚ್ಚು ಜನರು ಭಾಗವಹಿಸಲಿದ್ದಾರೆ.

‘ಆರ್ಯ ಈಡಿಗ ಅಭಿವೃದ್ಧಿ ನಿಗಮ ಸ್ಥಾಪನೆ, ಸಿಗಂದೂರು ಚೌಡೇಶ್ವರಿ ದೇವಸ್ಥಾನವನ್ನು ಸರ್ಕಾರ ತನ್ನ ವಶಕ್ಕೆ ಪಡೆಯುವುದಕ್ಕೆ ವಿರೋಧ, ರಾಜಕೀಯ ಪ್ರಾತಿನಿಧ್ಯ ಸೇರಿದಂತೆ ವಿವಿಧ ವಿಷಯಗಳ ಕುರಿತು ಚರ್ಚೆ ನಡೆಸಲಾಗುವುದು’ ಎಂದು ವಿಧಾನ ಪರಿಷತ್‌ ಮಾಜಿ ಸದಸ್ಯ ಎಚ್‌.ಆರ್‌.ಶ್ರೀನಾಥ್ ತಿಳಿಸಿದ್ದಾರೆ.

ADVERTISEMENT

‘ರಾಜ್ಯದಲ್ಲಿ 80 ಲಕ್ಷ ಜನಸಂಖ್ಯೆ ಹೊಂದಿರುವ ಆರ್ಯ ಈಡಿಗ ಸಮುದಾಯವು ಶಿಕ್ಷಣ, ಉದ್ಯೋಗ, ವ್ಯಾಪಾರ, ರಾಜಕೀಯ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಹಿಂದುಳಿದಿದೆ. ಕುಲ ಕಸುಬಾದ ಸೇಂದಿ ಇಳಿಸುವುದನ್ನು ನಿಲ್ಲಿಸಿದ ಬಳಿಕ ಈಡಿಗ ಸಮಾಜದವರು ಸಂಕಷ್ಟದಲ್ಲಿದ್ದು ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಸರ್ಕಾರಕ್ಕೆ ಮನವಿ ಮಾಡಲಾಗುತ್ತಿದೆ’ ಎಂದು ಅವರು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.