ADVERTISEMENT

ಈಶಾನ್ಯ ಸಾರಿಗೆ ನಿಗಮವಿನ್ನು 'ಕಲ್ಯಾಣ ಕರ್ನಾಟಕ ಸಾರಿಗೆ ನಿಗಮ'

​ಪ್ರಜಾವಾಣಿ ವಾರ್ತೆ
Published 7 ಜುಲೈ 2021, 12:17 IST
Last Updated 7 ಜುಲೈ 2021, 12:17 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೆಂಗಳೂರು: ಈಶಾನ್ಯ ಸಾರಿಗೆ ನಿಗಮಕ್ಕೆ ‘ಕಲ್ಯಾಣ ಕರ್ನಾಟಕ ಸಾರಿಗೆ ನಿಗಮ’ ಎಂದು ಮರುನಾಮಕರಣ ಮಾಡಿ ಆದೇಶ ಹೊರಡಿಸಲಾಗಿದೆ.

ಸಾರಿಗೆ ನಿಗಮಗಳ ಅಧಿನಿಯಮ 1950 ರ (ಕೇಂದ್ರ ಅಧಿನಿಯಮ 64) ಕಲಂ ಮೂರರಲ್ಲಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಹೆಸರನ್ನು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ಎಂದು ತಕ್ಷಣದಿಂದ ಜಾರಿಗೆ ಬರುವಂತೆ ಆದೇಶಿಸಲಾಗಿದೆ ಎಂದು ಸಾರಿಗೆ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ತಿಳಿಸಿದ್ದಾರೆ.

ಹೈದರಾಬಾದ್‌– ಕರ್ನಾಟಕ ಪ್ರದೇಶಕ್ಕೆ ಕಲ್ಯಾಣ ಕರ್ನಾಟಕ ಎಂದು ಮರುನಾಮಕರಣ ಮಾಡಿದ ಬಳಿಕ ಈಶಾನ್ಯ ಸಾರಿಗೆಗೂ ಈ ರೀತಿ ಮರು ನಾಮಕರಣ ಮಾಡಬೇಕೆಂಬುದು ಸ್ಥಳೀಯರ ಬೇಡಿಕೆಯಾಗಿತ್ತು. ಆದ್ದರಿಂದ ಹೆಸರು ಬದಲಿಸಲು ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಹೇಳಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.