ಕಲಬುರ್ಗಿ: ಕಲ್ಯಾಣ ಕರ್ನಾಟಕದ ಏಳು ಜಿಲ್ಲೆಗಳು ಹಾಗೂ ಉತ್ತರ ಕರ್ನಾಟಕದ ವಿಜಯಪುರ ಜಿಲ್ಲೆಯ ವ್ಯಾಪ್ತಿ ಹೊಂದಿರುವ ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಹೆಸರನ್ನು ‘ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ’ ಎಂದು ರಾಜ್ಯ ಸರ್ಕಾರ ಮರುನಾಮಕರಣ ಮಾಡಿದೆ.
‘ಹೆಸರು ಬದಲಿಸುವಂತೆ ಸಂಸ್ಥೆಯ ಆಳಿತ ಮಂಡಳಿ ಪ್ರಸ್ತಾವ ಸಲ್ಲಿಸಿತ್ತು. ಸಾರಿಗೆ ಇಲಾಖೆ ಬುಧವಾರ ಆದೇಶ ಹೊರಡಿಸಿದೆ’ ಎಂದು ಸಾರಿಗೆ ಖಾತೆಯನ್ನೂ ಹೊಂದಿರುವ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಬುಧವಾರ ಇಲ್ಲಿ ತಿಳಿಸಿದರು.
ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗುತ್ತಿದ್ದಂತೆಯೇ ಹೈದರಾಬಾದ್ ಕರ್ನಾಟಕದ ಹೆಸರನ್ನು ಕಲ್ಯಾಣ ಕರ್ನಾಟಕ ಎಂದು ಬದಲಾಯಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.