ADVERTISEMENT

ಕೆಪಿಸಿಸಿ ಅಧ್ಯಕ್ಷ ಸ್ಥಾನ ಉತ್ತರ ಕರ್ನಾಟಕಕ್ಕೆ ಕೊಡಿ: ಎಂ.ಬಿ.ಪಾಟೀಲ

​ಪ್ರಜಾವಾಣಿ ವಾರ್ತೆ
Published 26 ಜನವರಿ 2020, 19:47 IST
Last Updated 26 ಜನವರಿ 2020, 19:47 IST
ಎಂ.ಬಿ.ಪಾಟೀಲ
ಎಂ.ಬಿ.ಪಾಟೀಲ   

ವಿಜಯಪುರ: ‘ವಿರೋಧ ಪಕ್ಷದ ನಾಯಕ ದಕ್ಷಿಣದವರಿದ್ದು, ಕೆಪಿಸಿಸಿ ಅಧ್ಯಕ್ಷ ಸ್ಥಾನ ಉತ್ತರ ಕರ್ನಾಟಕಕ್ಕೇ ಕೊಡಬೇಕು. ಯಾವ ಜಾತಿಗೆ ನೀಡಬೇಕು ಎನ್ನುವುದು ಹೈಕಮಾಂಡ್‌ಗೆ ಬಿಟ್ಟಿದ್ದು’ ಎಂದು ಶಾಸಕ ಎಂ.ಬಿ.ಪಾಟೀಲ ಹೇಳಿದರು.

ಕೆಪಿಸಿಸಿ ಅಧ್ಯಕ್ಷರ ಆಯ್ಕೆ ಕುರಿತಂತೆ ಭಾನುವಾರ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ‘ಕೆಪಿಸಿಸಿ ಅಧ್ಯಕ್ಷ ಸ್ಥಾನ ಹೈಕಮಾಂಡ್‌ ಅಂಗಳದಲ್ಲಿದೆ. ನಾನು ಎಲ್ಲಿಯೂ ಲಾಬಿ ಮಾಡಿಲ್ಲ’ ಎಂದು ಸ್ಪಷ್ಟಪಡಿಸಿದರು.

‘ಮಧುಸೂದನ ಮಿಸ್ತ್ರಿ ಬಂದಾಗ ಹಾಗೂ ಸೋನಿಯಾ ಗಾಂಧಿ ಭೇಟಿ ವೇಳೆಯೂ ಪಕ್ಷ ಅಧಿಕಾರಕ್ಕೆ ಬರಲು ಏನು ಮಾಡಬೇಕು ಅನ್ನುವುದನ್ನು ಮಾತ್ರ ಹೇಳಿದ್ದೇನೆ. ಯಾವುದೇ ಜವಾಬ್ದಾರಿ ನೀಡಿದರೂ ನಿಭಾಯಿಸುವ ಶಕ್ತಿಯಿದೆ’ ಎಂದರು. ‘ಕೆಲ ಲೆಕ್ಕಾಚಾರಗಳ ಪ್ರಕಾರ ಉತ್ತರಕ್ಕೆಈ ಸ್ಥಾನ ಕೊಡಬೇಕು ಅಂತ ಚರ್ಚೆಯಾದಾಗ ಸಿದ್ದರಾಮಯ್ಯ ನನ್ನ ಹೆಸರು ಪ್ರಸ್ತಾಪ ಮಾಡಿರಬೇಕು. ಉಳಿದವುಗಳೆಲ್ಲ ಮಾಧ್ಯಮಗಳ ಸೃಷ್ಟಿ’ ಎಂದು ಹೇಳಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.