ADVERTISEMENT

ಉಪಚುನಾವಣೆಯಲ್ಲಿ ಮಗನ ಪರ ಪ್ರಚಾರ ಮಾಡಲ್ಲ: ಸಂಸದ ಬಿ.ಎನ್.ಬಚ್ಚೇಗೌಡ

​ಪ್ರಜಾವಾಣಿ ವಾರ್ತೆ
Published 1 ನವೆಂಬರ್ 2019, 7:53 IST
Last Updated 1 ನವೆಂಬರ್ 2019, 7:53 IST
ಬಿ.ಎನ್.ಬಚ್ಚೇಗೌಡ
ಬಿ.ಎನ್.ಬಚ್ಚೇಗೌಡ   

ಚಿಕ್ಕಬಳ್ಳಾಪುರ: ‘ನನ್ನ ಮಗ ಈಗ ಮನೆಗೆ ಬರುತ್ತಿಲ್ಲ. ನಾನು ಅವನ ಪರ ಪ್ರಚಾರ ಕೂಡ ಮಾಡಲ್ಲ. ಆತ ವಿದ್ಯಾವಂತ, ಬುದ್ಧಿವಂತ ಅವನ ತೀರ್ಮಾನ ಅವನಿಗೆ ಬಿಟ್ಟ ವಿಚಾರ. ಮಗನ ಸ್ಪರ್ಧೆ ವಿಚಾರದಲ್ಲಿ ನಾನು ಮಧ್ಯ ಪ್ರವೇಶ ಮಾಡಲ್ಲ’ ಎಂದು ಸಂಸದ ಬಿ.ಎನ್.ಬಚ್ಚೇಗೌಡ ಹೇಳಿದರು.

ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ನಾನು ಬೆಂಗಳೂರಿನಲ್ಲಿದ್ದೇನೆ. ನನ್ನ ಮಗ ಬೇರೆ ಕಡೆ ವಾಸವಾಗಿದ್ದಾನೆ. ನಾನು ಬಿಜೆಪಿ ಪಕ್ಷದ ಸಂಸದ. ನಾನು ಬಿಜೆಪಿಯ ನಿಷ್ಠಾವಂತ ವ್ಯಕ್ತಿ. ಆದ್ದರಿಂದ ನಾನು ಶರತ್ ಪರ ಮತ ಕೇಳುವುದಿಲ್ಲ. ಸುಪ್ರೀಂ ಕೋರ್ಟ್ ತೀರ್ಪು ಬಂದ ಬಳಿಕ ಈ ಬಗ್ಗೆ ಮಾತಾಡೋಣ’ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

‘ಪಠ್ಯದಿಂದ ಟಿಪ್ಪು ವಿಷಯ ಕೈ ಬಿಡುವುದು ರಾಜ್ಯ ಸರ್ಕಾರದ ತೀರ್ಮಾನ. ಅದಕ್ಕೆ ನಾವು ಬದ್ಧ. ವೈದ್ಯಕೀಯ ಕಾಲೇಜು ವಿಚಾರದಲ್ಲಿ ಡಿ.ಕೆ.ಶಿವಕುಮಾರ್ ಅವರು ಗೊಂದಲ ಮೂಡಿಸುವ ಅವಶ್ಯಕತೆ ಇಲ್ಲ. ಬೇಕಿದ್ದರೆ ಅವರು ಕನಕಪುರಕ್ಕೆ ಒಂದು ಕಾಲೇಜು ಪಡೆದುಕೊಳ್ಳಲಿ’ ಎಂದು ತಿಳಿಸಿದರು.

ADVERTISEMENT

‘ಸರ್ಕಾರ ಈಗಾಗಲೇ ಚಿಕ್ಕಬಳ್ಳಾಪುರಕ್ಕೆ ವೈದ್ಯಕೀಯ ಕಾಲೇಜು ಮಂಜೂರು ಮಾಡಿ, ಅನುದಾನ ಕೂಡ ಬಿಡುಗಡೆ ಮಾಡಿದೆ. ನವೆಂಬರ್ 8 ರಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರು ಕಾಲೇಜು ನಿರ್ಮಾಣ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.