ADVERTISEMENT

ಸಿಂದಗಿ ಉಪಚುನಾವಣೆಯಲ್ಲಿ ಸ್ಪರ್ಧೆ ಮಾಡುವುದಿಲ್ಲ: ಲಕ್ಷ್ಮಣ ಸವದಿ

​ಪ್ರಜಾವಾಣಿ ವಾರ್ತೆ
Published 28 ಸೆಪ್ಟೆಂಬರ್ 2021, 15:22 IST
Last Updated 28 ಸೆಪ್ಟೆಂಬರ್ 2021, 15:22 IST
ಪೋಟೊ ಶೀಷರ್ಿಕೆ(28ಅಥಣಿ3);- ವಿದಾನ ಪರಿಷತ ಸದಸ್ಯ ಲಕ್ಷ್ಮಣ ಸವದಿ 
ಪೋಟೊ ಶೀಷರ್ಿಕೆ(28ಅಥಣಿ3);- ವಿದಾನ ಪರಿಷತ ಸದಸ್ಯ ಲಕ್ಷ್ಮಣ ಸವದಿ    

ಅಥಣಿ: ‘ಸಿಂದಗಿ ಉಪಚುನಾವಣೆಯಲ್ಲಿ ನಾನು ಹಾಗೂ ನನ್ನ ಪುತ್ರ ಚಿದಾನಂದ ಸವದಿ ಯಾರೂ ಸ್ಪರ್ಧೆ ಮಾಡುವುದಿಲ್ಲ’ ಎಂದು ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಸ್ಪಷ್ಟಪಡಿಸಿದರು.

ಪಟ್ಟಣದ ತಮ್ಮ ಸ್ವಗೃಹದಲ್ಲಿ ಮಂಗಳವಾರ ‘ಪ್ರಜಾವಾಣಿ’ಯೊಂದಿಗೆ ಮಾತನಾಡಿ, ‘ಸಿಂದಗಿ ಉಪಚುನಾವಣೆ ಉಸ್ತುವಾರಿ ನನಗೆ ನೀಡಿದ್ದಾರೆ. ಶೀಘ್ರ ಕ್ಷೇತ್ರಕ್ಕೆ ತೆರಳಿ ಅಲ್ಲಿರುವ ಪಕ್ಷದ ಮುಖಂಡರು, ಸ್ಥಳೀಯ ನಾಯಕರು, ಸಮುದಾಯದ ಮುಖಂಡರ ಜೊತೆ ಸಭೆ ನಡೆಸುತ್ತೇನೆ. ಅಭ್ಯರ್ಥಿ ಯಾರೆಂಬುದು ಇನ್ನೂ ಘೋಷಣೆ ಆಗಿಲ್ಲ’ ಎಂದರು.

‘ಸಿಂದಗಿ, ಹಾನಗಲ್ ಉಪಚುನಾವಣೆಯಲ್ಲಿ ಬಿಜೆಪಿ ಭಾರಿ ಅಂತರದಿಂದ ಗೆಲುವು ಸಾಧಿಸಲಿದೆ. ಹಾನಗಲ್ ಕ್ಷೇತ್ರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಜಿಲ್ಲೆ ಆಗಿರುವುದರಿಂದ ಅಲ್ಲಿನ ಜನರು ಮುಖ್ಯಮಂತ್ರಿ ಅವರಿಗೆ ಬೆಂಬಲವಾಗಿ ಬಿಜೆಪಿ ಅಭ್ಯರ್ಥಿಯನ್ನು ಗೆಲ್ಲಿಸಲಿದ್ದಾರೆ.ಚುನಾವಣೆ ಪ್ರಚಾರಕ್ಕೆ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಹಾಗೂ ಇತರೆ ಸಚಿವರು ಬರಲಿದ್ದಾರೆ. ಅಭ್ಯರ್ಥಿ ಗೆಲುವೇ ನಮ್ಮ ಗುರಿ, ನಮ್ಮಲ್ಲಿ ಯಾವುದೇ ಅಸಮಾಧಾನ ಇಲ್ಲ’ ಎಂದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.