ADVERTISEMENT

ವಯನಾಡ್‌ ಲೋಕಸಭಾ ಕ್ಷೇತ್ರದ ಉಪಚುನಾವಣೆಗೆ ಆತುರವಿಲ್ಲ– ಆಯೋಗ

​ಪ್ರಜಾವಾಣಿ ವಾರ್ತೆ
Published 29 ಮಾರ್ಚ್ 2023, 18:43 IST
Last Updated 29 ಮಾರ್ಚ್ 2023, 18:43 IST
   

ನವದೆಹಲಿ: ಲೋಕಸಭಾ ಸದಸ್ಯತ್ವದಿಂದ ಅನರ್ಹಗೊಂಡಿರುವ ಕಾಂಗ್ರೆಸ್‌ ಮುಖಂಡ ರಾಹುಲ್ ಗಾಂಧಿ ಅವರಿಗೆ ಮಾನನಷ್ಟ ಮೊಕದ್ದಮೆಯಲ್ಲಿ ಮೇಲ್ಮನವಿ ಸಲ್ಲಿಸಲು ನ್ಯಾಯಾಲಯವು ಒಂದು ತಿಂಗಳ ಕಾಲಾವಕಾಶ ನೀಡಿದೆ. ಹೀಗಾಗಿ, ವಯನಾಡ್ ಲೋಕಸಭಾ ಕ್ಷೇತ್ರಕ್ಕೆ ಉಪಚುನಾವಣೆ ಘೋಷಿಸಲು ಯಾವುದೇ ಆತುರವಿಲ್ಲ ಎಂದು ಭಾರತೀಯ ಚುನಾವಣಾ ಆಯೋಗ ಬುಧವಾರ ಹೇಳಿದೆ.

ಬುಧವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯ ಚುನಾವಣಾ ಆಯುಕ್ತ ರಾಜೀವ್‌ ಕುಮಾರ್‌, ‘ವಿಚಾರಣಾ ನ್ಯಾಯಾಲಯದ ಮುಂದಿನ ಆದೇಶದವರೆಗೆ ನಾವು ಕಾಯುತ್ತೇವೆ. ಫೆಬ್ರುವರಿವರೆಗೆ ತೆರವಾಗಿರುವ ಸ್ಥಾನಗಳ ಆಧಾರದಲ್ಲಿ ಲೋಕಸಭೆ ಹಾಗೂ ವಿಧಾನಸಭೆಗಳ ಉಪಚುನಾವಣೆ ಘೋಷಣೆಗೆ ಆಯೋಗ ನಿರ್ಧಾರ ಕೈಗೊಂಡಿದೆ’ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT