ADVERTISEMENT

ನಿಗಮ–ಮಂಡಳಿ ಅಧ್ಯಕ್ಷರ ರಾಜೀನಾಮೆಗೆ ಸೂಚನೆ

​ಪ್ರಜಾವಾಣಿ ವಾರ್ತೆ
Published 11 ಜುಲೈ 2022, 18:16 IST
Last Updated 11 ಜುಲೈ 2022, 18:16 IST

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾ ವಣೆ ಹೊಸ್ತಿಲಲ್ಲಿರುವಂತೆ ಕೆಲವು ನಿಗಮ –ಮಂಡಳಿ ಅಧ್ಯಕ್ಷರು– ಉಪಾಧ್ಯಕ್ಷರನ್ನು ಬದಲಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮುಂದಾಗಿದ್ದಾರೆ. ರಾಜೀ ನಾಮೆ ನೀಡುವಂತೆ ಈಗಾಗಲೇ ಕೆಲವರಿಗೆ ಸೂಚನೆ ನೀಡಿದ್ದಾರೆ.

ಶಾಸಕ ಬಿ.ಎಸ್. ಯಡಿಯೂರಪ್ಪ ಅವರನ್ನು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್‌ಕುಮಾರ್‌ ಕಟೀಲ್‌ ಭಾನುವಾರ ಭೇಟಿ ಮಾಡಿದ ಬೆನ್ನಲ್ಲೆ ಈ ಬೆಳವಣಿಗೆ ನಡೆದಿದೆ. ಈ ಬಗ್ಗೆ ಮುಖ್ಯಮಂತ್ರಿ ಜೊತೆ ನಳಿನ್‌ ಕುಮಾರ್‌ ಕೂಡಾ ಚರ್ಚೆ ನಡೆಸಿ ದ್ದಾರೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ.

ಪಕ್ಷದ ಶಾಸಕರು ಅಧ್ಯಕ್ಷರಾಗಿ ರುವ ನಿಗಮ–ಮಂಡಳಿಗಳನ್ನು ಹೊರತುಪಡಿಸಿ ಉಳಿದ ನಿಗಮ ಮಂಡಳಿಗಳ ಅಧ್ಯಕ್ಷರನ್ನು ಬದಲಿಸಲು ಚರ್ಚೆ ನಡೆದಿದೆ. 8–10 ನಿಗಮ ಮಂಡಳಿಗಳನ್ನು ಬಿಟ್ಟು ಉಳಿದೆಲ್ಲವುಗಳ ಅಧ್ಯಕ್ಷರನ್ನು ಬದಲಿಸುವ ಬಗ್ಗೆ ಚರ್ಚೆ ನಡೆದಿದೆ.ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಅಧೀನದಲ್ಲಿ ಬರುವ ಯಾವುದೇ ಅಕಾಡೆಮಿಗಳ ಅಧ್ಯಕ್ಷರ ಬದಲಾವಣೆ ಸಾಧ್ಯತೆ ಇಲ್ಲ ಎಂದೂ ಮೂಲಗಳು ತಿಳಿಸಿವೆ.

ADVERTISEMENT

‘ಚುನಾವಣೆಗೆ 10 ತಿಂಗಳು ಇರುವಾಗ ಪಕ್ಷದ ಶಾಸಕರು ಮತ್ತು ಕಾರ್ಯಕರ್ತರಿಗೆ ನಿಗಮ ಮಂಡಳಿ ಗಳಲ್ಲಿ ಆದ್ಯತೆ ನೀಡಲು ಉದ್ದೇಶಿಸಲಾಗಿದೆ. ಯಾರನ್ನೆಲ್ಲ ಬದಲಾವಣೆ ಮಾಡ ಬೇಕು ಎಂಬ ಬಗ್ಗೆ ಚರ್ಚೆ ನಡೆದಿದೆ’ ಎಂದೂ ಮೂಲಗಳು ಹೇಳಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.