ADVERTISEMENT

ಚನ್ನಗಿರಿ ಶಾಸಕ ಶಿವಗಂಗಾ ಬಸವರಾಜುಗೆ ನೋಟಿಸ್‌: ಡಿ.ಕೆ. ಶಿವಕುಮಾರ್‌

​ಪ್ರಜಾವಾಣಿ ವಾರ್ತೆ
Published 16 ಆಗಸ್ಟ್ 2025, 14:36 IST
Last Updated 16 ಆಗಸ್ಟ್ 2025, 14:36 IST
ಡಿ.ಕೆ. ಶಿವಕುಮಾರ್‌
ಡಿ.ಕೆ. ಶಿವಕುಮಾರ್‌   

ಬೆಂಗಳೂರು: ‘ಎಚ್ಚರಿಕೆ ನೀಡಿದರೂ, ಮುಖ್ಯಮಂತ್ರಿ ಅಧಿಕಾರ ಹಸ್ತಾಂತರದ ಬಗ್ಗೆ ಹೇಳಿಕೆ ನೀಡಿರುವ ಚನ್ನಗಿರಿ ಶಾಸಕ ಶಿವಗಂಗಾ ಬಸವರಾಜು ಅವರಿಗೆ ನೋಟಿಸ್‌ ನೀಡಲಾಗುವುದು’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಹೇಳಿದರು.

ಸುದ್ದಿಗಾರರ ಜತೆ ಮಾತನಾಡಿದ ಅವರು, ‘ಮುಖ್ಯಮಂತ್ರಿ ಅಧಿಕಾರ, ಮತ್ತಿತರ ವಿಚಾರಗಳ ಬಗ್ಗೆ ಯಾರೂ ಮಾತಾಡಬಾರದು. ಶಾಸಕರು ಪಕ್ಷದ ಶಿಸ್ತು ಪಾಲಿಸಬೇಕು. ಚೌಕಟ್ಟು ಮೀರಬಾರದು. ಅನಗತ್ಯ ಹೇಳಿಕೆಗಳನ್ನು ಕೊಟ್ಟು ಗೊಂದಲ ಮೂಡಿಸಬಾರದು ಎಂದು ಕಟ್ಟುನಿಟ್ಟಾಗಿ ಸೂಚನೆ ನೀಡಲಾಗಿದೆ. ಆದರೂ, ಶಿವಗಂಗಾ ಅವರು ದಾವಣಗೆರೆಯಲ್ಲಿ ಹೇಳಿಕೆ ನೀಡಿದ್ದಾರೆ. ಇದು ಪಕ್ಷದ ಶಿಸ್ತಿನ ಉಲ್ಲಂಘನೆ’ ಎಂದರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT