ADVERTISEMENT

ಕನ್ನಡ ಕಡೆಗಣನೆ: ಮೆಟ್ರೋ ವ್ಯವಸ್ಥಾಪಕ ನಿರ್ದೇಶಕರಿಗೆ ನೋಟಿಸ್‌

​ಪ್ರಜಾವಾಣಿ ವಾರ್ತೆ
Published 1 ಸೆಪ್ಟೆಂಬರ್ 2021, 12:02 IST
Last Updated 1 ಸೆಪ್ಟೆಂಬರ್ 2021, 12:02 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ಉಡುಪಿ: ಬೆಂಗಳೂರಿನ ಕೆಂಗೇರಿ ಬಳಿ ಈಚೆಗೆ ನಡೆದ ಮೆಟ್ರೋ ಸಂಚಾರ ಉದ್ಘಾಟನಾ ಸಮಾರಂಭದಲ್ಲಿ ಕನ್ನಡ ಭಾಷೆಯನ್ನು ಕಡೆಗಣಿಸಿರುವುದಕ್ಕೆ ಮೆಟ್ರೋ ವ್ಯವಸ್ಥಾಪಕ ನಿರ್ದೇಶಕರಿಗೆ ನೋಟಿಸ್ ನೀಡಲಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ.ಸುನಿಲ್ ಕುಮಾರ್ ತಿಳಿಸಿದ್ದಾರೆ.

ಸರ್ಕಾರ ಕನ್ನಡವನ್ನು ಅಧಿಕೃತ ಭಾಷೆ ಎಂದು ಘೋಷಿಸಿದ್ದರೂ ಕನ್ನಡದ ನಿರ್ಲಕ್ಷ್ಯ ಸಹಿಸುವುದಿಲ್ಲ. ಸರ್ಕಾರದ ಕಾರ್ಯಕ್ರಮಗಳಲ್ಲಿ ಕನ್ನಡ ಬಳಕೆ ಮಾಡದಿರುವುದು ಅಪರಾಧ. ಈ ಸಂಬಂಧ ಕೂಡಲೇ ಸ್ಪಷ್ಟೀಕರಣ ನೀಡಬೇಕು, ಕಾರ್ಯಕ್ರಮ ಆಯೋಜಕರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಎಂದು ಮೆಟ್ರೋ ನಿರ್ದೇಶಕರಿಗೆ ನಿರ್ದೇಶನ ನೀಡಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.

ಸರ್ಕಾರದ ಕಾರ್ಯಕ್ರಮಗಳಲ್ಲಿ ಕನ್ನಡ ಬಳಕೆ ಕಡ್ಡಾಯ. ಕಾರ್ಯಕ್ರಮದ ಆಯೋಜಕರು ಈ ನಿಯಮವನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಸೂಚನೆ ನೀಡಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.