ADVERTISEMENT

ಟೆಂಡರ್ ಪ್ರಕ್ರಿಯೆ ರದ್ದು: ಆರೋಗ್ಯ ಸಚಿವ ಡಾ.ಕೆ.ಸುಧಾಕರ್‌ಗೆ ಹೈಕೋರ್ಟ್ ನೋಟಿಸ್

​ಪ್ರಜಾವಾಣಿ ವಾರ್ತೆ
Published 25 ಫೆಬ್ರುವರಿ 2021, 23:31 IST
Last Updated 25 ಫೆಬ್ರುವರಿ 2021, 23:31 IST
ಹೈಕೋರ್ಟ್
ಹೈಕೋರ್ಟ್   

ಬೆಂಗಳೂರು: ₹1,800 ಕೋಟಿ ಮೊತ್ತದಲ್ಲಿ ಆಂಬುಲೆನ್ಸ್ ನಿಯಂತ್ರಣಾ ಕೇಂದ್ರ ತೆರೆಯುವ ಟೆಂಡರ್ ಪ್ರಕ್ರಿಯೆ ರದ್ದು ಪಡಿಸಿರುವ ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಅವರಿಗೆ ನೋಟಿಸ್ ನೀಡಲು ಹೈಕೋರ್ಟ್ ಆದೇಶಿದೆ.

ಟೆಂಡರ್ ಪ್ರಕ್ರಿಯೆ ಮೇಲ್ವಿಚಾರಣೆ ನಡೆಸುತ್ತಿರುವ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ, ‘2020ರ ಜನವರಿ 17ರಂದು ಟೆಂಡರ್ ಪ್ರಕ್ರಿಯೆ ರದ್ದುಪಡಿಸಲಾಗಿದೆ. ನ್ಯಾಯಾಲಯ ಇಡೀ ಪ್ರಕ್ರಿಯೆಯ ಮೇಲ್ವಿಚಾರಣೆ ನಡೆಸುತ್ತಿರುವಾಗ, ಅನುಮತಿ ಪಡೆಯದೇ ಏಕಾಏಕಿ ಸರ್ಕಾರ ರದ್ದುಗೊಳಿಸಬಹುದೇ’ ಎಂದು ಪ್ರಶ್ನಿಸಿತು.

‘ಸಚಿವರ ಬದಲು ಮುಖ್ಯ ಕಾರ್ಯದರ್ಶಿ ಅವರನ್ನು ಪ್ರತಿವಾದಿಯಾಗಿ ಮಾಡಿಕೊಳ್ಳಬಹುದು’ ಎಂದು ಸರ್ಕಾರದ ಪರ ವಕೀಲರು ಮನವಿ ಮಾಡಿದರು. ‘ಟೆಂಡರ್ ಪ್ರಕ್ರಿಯೆ ರದ್ದುಗೊಳಿಸುವ ಆದೇಶದಲ್ಲಿ ಸಚಿವರ ಸಹಿ ಇದೆ’ ಎಂದು ಪೀಠ ಅಭಿಪ್ರಾಯಪಟ್ಟಿತು.

ADVERTISEMENT

ಸಚಿವರನ್ನು ಪ್ರತಿವಾದಿಯನ್ನಾಗಿಸಲು ಅನುಮತಿ ಕೋರಿ ಅರ್ಜಿದಾರರಾದ ಭಾರತ ಪುನರುತ್ತಾನ ಟ್ರಸ್ಟ್ ಸಲ್ಲಿಸಿದ್ದ ಅರ್ಜಿಗೂ ಅನುಮತಿ ನೀಡಿದಪೀಠ, ಮಾರ್ಚ್ 30ಕ್ಕೆ ವಿಚಾರಣೆ ಮುಂದೂಡಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.