ADVERTISEMENT

ಪಿಂಚಣಿ ಸಮಸ್ಯೆ ಪರಿಹಾರ: ಹೊರಟ್ಟಿ ಪತ್ರ

​ಪ್ರಜಾವಾಣಿ ವಾರ್ತೆ
Published 6 ಅಕ್ಟೋಬರ್ 2021, 16:34 IST
Last Updated 6 ಅಕ್ಟೋಬರ್ 2021, 16:34 IST
ಸಿಎಂ ಬಸವರಾಜ ಬೊಮ್ಮಾಯಿ ಅವರ ಸಾಂದರ್ಭಿಕ ಚಿತ್ರ
ಸಿಎಂ ಬಸವರಾಜ ಬೊಮ್ಮಾಯಿ ಅವರ ಸಾಂದರ್ಭಿಕ ಚಿತ್ರ   

ಬೆಂಗಳೂರು: 2006ರ ಏಪ್ರಿಲ್‌ 1ರ ನಂತರ ಸರ್ಕಾರಿ ಸೇವೆಗೆ ಸೇರಿರುವ ಎರಡು ಲಕ್ಷಕ್ಕೂ ಅಧಿಕ ನೌಕರರನ್ನು ನೂತನ ಪಿಂಚಣಿ ಯೋಜನೆ ಬದಲಿಗೆ ನಿಶ್ಚಿತ ಪಿಂಚಣಿ ಯೋಜನೆಯಡಿ ತರಲು ಕ್ರಮ ಕೈಗೊಳ್ಳುವಂತೆ ಕೋರಿ ವಿಧಾನ ಪರಿಷತ್‌ ಸಭಾಪತಿ ಬಸವರಾಜ ಹೊರಟ್ಟಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದಿದ್ದಾರೆ.

‘ನಿಶ್ಚಿತ ಪಿಂಚಣಿ ಯೋಜನೆಯನ್ನೇ ಜಾರಿಗೊಳಿಸಬೇಕೆಂದು ಆಗ್ರಹಿಸಿ ಹಲವು ಹೋರಾಟಗಳು ನಡೆದಿದ್ದವು. ಈ ಸಂಬಂಧ ಸಲ್ಲಿಸಿರುವ ಮನವಿ ಪರಿಶೀಲಿಸಿ ಪಿಂಚಣಿ ವ್ಯವಸ್ಥೆಯಲ್ಲಿ ಬದಲಾವಣೆ ಅಥವಾ ಮಾರ್ಪಾಡು ಮಾಡುವ ಕುರಿತು ಶಿಫಾರಸು ನೀಡಲು ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ನೇತೃತ್ವದಲ್ಲಿ ಅಧಿಕಾರಿಗಳ ಸಮಿತಿ ನೇಮಿಸಿ 2018ರ ಡಿಸೆಂಬರ್‌ 11ರಂದು ಆದೇಶ ಹೊರಡಿಸಲಾಗಿತ್ತು. ಈ ಸಮಿತಿಯಿಂದ ಮೂರು ತಿಂಗಳೊಳಗೆ ವರದಿ ಪಡೆದು, ನಿಶ್ಚಿತ ಪಿಂಚಣಿ ಯೋಜನೆ ಜಾರಿಗೆ 2022–23ರ ಬಜೆಟ್‌ನಲ್ಲಿ ಘೋಷಣೆ ಮಾಡಬೇಕು’ ಎಂದು ಪತ್ರದಲ್ಲಿ ಕೋರಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT