
ಪಿಟಿಐ
ನವದೆಹಲಿ: ಮಹಾತ್ಮ ಗಾಂಧಿ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವಾಲಯವು ಕರ್ನಾಟಕಕ್ಕೆ ₹622 ಕೋಟಿ ಬಿಡುಗಡೆ ಮಾಡದೆ ಬಾಕಿ ಇರಿಸಿಕೊಂಡಿದೆ.
ಲೋಕಸಭೆಯಲ್ಲಿ ಮಂಗಳವಾರ ಪ್ರಶ್ನೋತ್ತರ ಅವಧಿಯಲ್ಲಿ ಸದಸ್ಯರೊಬ್ಬರು ಕೇಳಿದ ಪ್ರಶ್ನೆಗೆ ಗ್ರಾಮೀಣಾಭಿವೃದ್ಧಿ ಸಚಿವ ಶಿವರಾಜ ಸಿಂಗ್ ಚೌಹಾಣ್ ಈ ಬಗ್ಗೆ ಉತ್ತರ ನೀಡಿದ್ದಾರೆ. ರಾಜ್ಯಕ್ಕೆ ಕೂಲಿ ಮೊತ್ತ ₹8.94 ಕೋಟಿ, ಸಾಮಗ್ರಿ ವೆಚ್ಚ ₹576 ಕೋಟಿ ಹಾಗೂ ಆಡಳಿತಾತ್ಮಕ ₹37 ಕೋಟಿ ಬಿಡುಗಡೆ ಮಾಡಬೇಕಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.