ADVERTISEMENT

ನರೇಗಾ ಹೋರಾಟ: 13ರಂದು ಕಾಂಗ್ರೆಸ್‌ ಸಭೆ

​ಪ್ರಜಾವಾಣಿ ವಾರ್ತೆ
Published 11 ಜನವರಿ 2026, 14:30 IST
Last Updated 11 ಜನವರಿ 2026, 14:30 IST
ಕಾಂಗ್ರೆಸ್‌
ಕಾಂಗ್ರೆಸ್‌   

ಬೆಂಗಳೂರು: ‘ನರೇಗಾ ಬಚಾವ್‌ ಸಂಗ್ರಾಮ್‌’ ಕಾರ್ಯಕ್ರಮದ ಆಯೋಜನೆ, ಬೂತ್‌ ಮಟ್ಟದ ಏಜೆಂಟರ ಪಟ್ಟಿ ತಯಾರಿ ಮತ್ತು ಸ್ಥಳಿಯ ಸಂಸ್ಥೆಗಳಿಗೆ ನಡೆಯಲಿರುವ ಚುನಾವಣೆಯ ಕುರಿತು ಚರ್ಚಿಸಲು ಇದೇ 13ರಂದು ಅರಮನೆ ಮೈದಾನದಲ್ಲಿ ಕಾಂಗ್ರೆಸ್‌ ಮುಖಂಡರ ಸಭೆ ನಡೆಯಲಿದೆ.

‘ಅಂದು ಬೆಳಿಗ್ಗೆ 11 ಗಂಟೆಗೆ ನಡೆಯಲಿರುವ ಈ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಎಐಸಿಸಿ ಕಾರ್ಯದರ್ಶಿಗಳು, ಪಕ್ಷದ ಸಂಸದರು, ಶಾಸಕರು, ಪರಿಷತ್‌ ಸದಸ್ಯರು, ನಿಗಮ ಮಂಡಳಿಗಳ ಅಧ್ಯಕ್ಷರು, ಪರಾಜಿತ ಅಭ್ಯರ್ಥಿಗಳು, ಮುಂಚೂಣಿ ಘಟಕಗಳ ಅಧ್ಯಕ್ಷರು, ಕೆಪಿಸಿಸಿ ಪದಾಧಿಕಾರಿಗಳು ಸೇರಿದಂತೆ ಎಲ್ಲ ನಾಯಕರು ಭಾಗವಹಿಸಲಿದ್ದಾರೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

‘ನರೇಗಾ ಕಾಯ್ದೆಗೆ ತಿದ್ದುಪಡಿ ತಂದು, ಅದರ ಹೆಸರು ಬದಲಿಸುವ ಜೊತೆಗೆ ಮೂಲ ಸ್ವರೂಪಕ್ಕೇ ಧಕ್ಕೆ ತಂದಿರುವ ಕೇಂದ್ರ ಸರ್ಕಾರದ ನಡೆಯನ್ನು ಖಂಡಿಸಿ ದೇಶದಾದ್ಯಂತ ಪಕ್ಷ ಪ್ರತಿಭಟನೆ ಹಮ್ಮಿಕೊಳ್ಳಲಿದೆ. ರಾಜ್ಯದಲ್ಲಿಯೂ ತೀವ್ರ ಸ್ವರೂಪದ ಪ್ರತಿಭಟನೆ ಆಯೋಜಿಸುವ ಕುರಿತು ಈ ಸಭೆಯಲ್ಲಿ ಚರ್ಚೆ ನಡೆಸಲಾಗುವುದು. ಜೊತೆಗೆ, ಸ್ಥಳೀಯ ಸಂಸ್ಥೆಗಳಿಗೆ ನಡೆಯಲಿರುವ ಚನಾವಣೆಗೆ ಸಿದ್ಧತೆ ಮಾಡಿಕೊಳ್ಳುವ ಬಗ್ಗೆಯೂ ಚರ್ಚೆ ನಡೆಯಲಿದೆ’ ಎಂದು ಶಿವಕುಮಾರ್ ತಿಳಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.