ADVERTISEMENT

ಯೋಜನೆ ಸ್ಥಳಾಂತರ ವಿರೋಧಿಸಿ ಇಸ್ರೊ ಕಚೇರಿ ಎದುರು ಎನ್ಎಸ್‌ಯುಐ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 1 ಡಿಸೆಂಬರ್ 2021, 7:58 IST
Last Updated 1 ಡಿಸೆಂಬರ್ 2021, 7:58 IST
ಎನ್ಎಸ್‌ಯುಐ  ಪ್ರತಿಭಟನೆ
ಎನ್ಎಸ್‌ಯುಐ ಪ್ರತಿಭಟನೆ   

ಬೆಂಗಳೂರು: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ (ಇಸ್ರೊ) ಮಾನವಸಹಿತ ಗಗನಯಾನ ಯೋಜನೆಯನ್ನು ಬೆಂಗಳೂರಿನಿಂದ ಗುಜರಾತ್ ರಾಜ್ಯಕ್ಕೆ ಸ್ಥಳಾಂತರ ಮಾಡುವ ಪ್ರಸ್ತಾವ ವಿರೋಧಿಸಿ ಎನ್ಎಸ್‌ಯುಐಕಾರ್ಯಕರ್ತರು ಇಸ್ರೊ ಕೇಂದ್ರ ಕಚೇರಿ ಎದುರು ಬುಧವಾರ ಪ್ರತಿಭಟನೆ ನಡೆಸಿದರು.

ಪ್ರತಿಭಟನಾ ಸಭೆಯಲ್ಲಿ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, 'ಕೇಂದ್ರ ಸರ್ಕಾರವು ಕರ್ನಾಟಕದಿಂದ ಪ್ರಮುಖ ಸಂಸ್ಥೆಗಳು ಮತ್ತು ಯೋಜನೆಗಳನ್ನು ಸ್ಥಳಾಂತರಿಸಲು ಪ್ರಯತ್ನಿಸುತ್ತಿದೆ. ಇದು ಕನ್ನಡಿಗರಿಗೆ ಮಾಡುತ್ತಿರುವ ದ್ರೋಹ' ಎಂದರು.

ಮಾನವಸಹಿತ ಗಗನಯಾನ ಯೋಜನೆಯನ್ನು ಬೆಂಗಳೂರಿನಿಂದಲೇ ನಿರ್ವಹಣೆ ಮಾಡಬೇಕು. ಸ್ಥಳಾಂತರದ ಪ್ರಸ್ತಾವವನ್ನು ತಕ್ಷಣ ಕೈಬಿಡಬೇಕು ಎಂದು ಆಗ್ರಹಿಸಿದರು.

ADVERTISEMENT

ಶಾಸಕ ಕೃಷ್ಣ ಬೈರೇಗೌಡ, ಎನ್ಎಸ್‌ಯುಐರಾಜ್ಯ ಘಟಕದ ಅಧ್ಯಕ್ಷ ಕೀರ್ತಿ ಗಣೇಶ್ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.