ADVERTISEMENT

ಇಸ್ರೊ ಯೋಜನೆ ಸ್ಥಳಾಂತರ ವಿರೋಧಿಸಿ ಎನ್‌ಎಸ್‌ಯುಐ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 1 ಡಿಸೆಂಬರ್ 2021, 16:16 IST
Last Updated 1 ಡಿಸೆಂಬರ್ 2021, 16:16 IST
ಮಾನವಸಹಿತ ಗಗನಯಾನ ಯೋಜನೆ ಸ್ಥಳಾಂತರ ವಿರೋಧಿಸಿ ಎನ್‌ಎಸ್‌ಯುಐ ಕಾರ್ಯಕರ್ತರು ಇಸ್ರೊ ಕೇಂದ್ರ ಕಚೇರಿ ಎದುರು ಬುಧವಾರ ಪ್ರತಿಭಟನೆ ನಡೆಸಿದರು. ಎನ್‌ಎಸ್‌ಯುಐ ರಾಜ್ಯ ಘಟಕದ ಅಧ್ಯಕ್ಷ ಕೀರ್ತಿ ಗಣೇಶ್, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಇದ್ದರು– ಪ್ರಜಾವಾಣಿ ಚಿತ್ರ
ಮಾನವಸಹಿತ ಗಗನಯಾನ ಯೋಜನೆ ಸ್ಥಳಾಂತರ ವಿರೋಧಿಸಿ ಎನ್‌ಎಸ್‌ಯುಐ ಕಾರ್ಯಕರ್ತರು ಇಸ್ರೊ ಕೇಂದ್ರ ಕಚೇರಿ ಎದುರು ಬುಧವಾರ ಪ್ರತಿಭಟನೆ ನಡೆಸಿದರು. ಎನ್‌ಎಸ್‌ಯುಐ ರಾಜ್ಯ ಘಟಕದ ಅಧ್ಯಕ್ಷ ಕೀರ್ತಿ ಗಣೇಶ್, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಇದ್ದರು– ಪ್ರಜಾವಾಣಿ ಚಿತ್ರ   

ಬೆಂಗಳೂರು: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ (ಇಸ್ರೊ) ಮಾನವಸಹಿತ ಗಗನಯಾನ ಯೋಜನೆಯನ್ನು ಬೆಂಗಳೂರಿನಿಂದ ಗುಜರಾತ್‌ಗೆ ಸ್ಥಳಾಂತರಿಸುವ ಪ್ರಸ್ತಾವ ವಿರೋಧಿಸಿ ಎನ್‌ಎಸ್‌ಯುಐ ಕಾರ್ಯಕರ್ತರು ನ್ಯೂ ಬಿಇಎಲ್‌ ರಸ್ತೆಯಲ್ಲಿರುವ ಇಸ್ರೊ ಕೇಂದ್ರ ಕಚೇರಿ ಎದುರು ಬುಧವಾರ ಪ್ರತಿಭಟನೆ ನಡೆಸಿದರು.

ಪ್ರತಿಭಟನಾ ಸಭೆಯಲ್ಲಿ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ‘ಇಸ್ರೊ ರಾಜ್ಯದ ಹೆಮ್ಮೆಯ ಸಂಸ್ಥೆ. ಇಷ್ಟು ದಿನಗಳ ಕಾಲ ಬೆಂಗಳೂರಿನಿಂದಲೇ ಈ ಯೋಜನೆಯ ಸಿದ್ಧತೆ ನಡೆಯುತ್ತಿತ್ತು. ಈಗ ದಿಢೀರನೆ ಯೋಜನೆಯನ್ನು ಗುಜರಾತ್‌ಗೆ ಸ್ಥಳಾಂತರ ಮಾಡಲು ಕೇಂದ್ರ ಸರ್ಕಾರ ಮುಂದಾಗಿದೆ. ಯೋಜನೆ ಬೆಂಗಳೂರಿನಲ್ಲೇ ಉಳಿಯಬೇಕು. ಅದಕ್ಕಾಗಿ ರಾಜ್ಯದಾದ್ಯಂತ ಹೋರಾಟ ನಡೆಸಲಾಗುವುದು’ ಎಂದರು.

ಕಾಂಗ್ರೆಸ್‌ ಪಕ್ಷ ಮಾತ್ರವಲ್ಲ ರಾಜ್ಯದ ಎಲ್ಲರೂ ಈ ಹೋರಾಟಕ್ಕೆ ಕೈಜೋಡಿಸಬೇಕು. ರಾಜ್ಯದಿಂದ ಆಯ್ಕೆಯಾದ ಬಿಜೆಪಿಯ 25 ಸಂಸದರು ಇದ್ದಾರೆ. ಅವರು ಈ ವಿಷಯದಲ್ಲಿ ಧ್ವನಿ ಎತ್ತಬೇಕು. ರಾಜ್ಯ ಮತ್ತು ರಾಜ್ಯದ ವಿಜ್ಞಾನಿಗಳ ಗೌರವದ ಪ್ರಶ್ನೆ ಈ ವಿಷಯದ ಹಿಂದಿದೆ. ಯೋಜನೆಯ ಸ್ಥಳಾಂತರ ರಾಜ್ಯಕ್ಕೆ ಅವಮಾನ ಮಾಡಿದಂತೆ ಎಂದು ಹೇಳಿದರು.

ADVERTISEMENT

ಶಾಸಕ ಕೃಷ್ಣ ಬೈರೇಗೌಡ, ಎನ್‌ಎಸ್‌ಯುಐ ರಾಜ್ಯ ಘಟಕದ ಅಧ್ಯಕ್ಷ ಕೀರ್ತಿ ಗಣೇಶ್‌, ಮುಖಂಡರಾದ ಹನುಮಂತೇಗೌಡ, ಜಯಸಿಂಹ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.