ADVERTISEMENT

ರಾಜ್ಯದಲ್ಲಿ 107 ಹೊಸ ಓಮೈಕ್ರಾನ್ ಪ್ರಕರಣ: ಒಟ್ಟು ಸಂಖ್ಯೆ 333ಕ್ಕೆ ಏರಿಕೆ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 7 ಜನವರಿ 2022, 7:08 IST
Last Updated 7 ಜನವರಿ 2022, 7:08 IST
ಓಮೈಕ್ರಾನ್ ಪ್ರಕರಣಗಳ ಸಂಖ್ಯೆಯಲ್ಲಿ ಏರಿಕೆ
ಓಮೈಕ್ರಾನ್ ಪ್ರಕರಣಗಳ ಸಂಖ್ಯೆಯಲ್ಲಿ ಏರಿಕೆ   

ಬೆಂಗಳೂರು: ರಾಜ್ಯದಲ್ಲಿ ಗುರುವಾರ 107 ಹೊಸ ಓಮೈಕ್ರಾನ್ ಪ್ರಕರಣಗಳು ವರದಿಯಾಗಿವೆ.

ಇದರೊಂದಿಗೆ ರಾಜ್ಯದಲ್ಲಿ ಒಟ್ಟು ಓಮೈಕ್ರಾನ್ ಪ್ರಕರಣಗಳ ಸಂಖ್ಯೆ 333ಕ್ಕೆ ಏರಿಕೆ ಕಂಡಿದೆ.

ಆರೋಗ್ಯ ಸಚಿವ ಕೆ. ಸುಧಾಕರ್‌ ಅವರು ಈ ಕುರಿತು ಟ್ವೀಟ್ ಮಾಡಿದ್ದು, ಜನವರಿ 6ರಂದು ವರದಿಯಾಗಿರುವ ಓಮೈಕ್ರಾನ್ ಪ್ರಕರಣಗಳ ಸಂಖ್ಯೆ ಪ್ರಕಟಿಸಿದ್ದಾರೆ.

ADVERTISEMENT

ರಾಜ್ಯದಲ್ಲಿ ಕೋವಿಡ್–19 ಮತ್ತು ರೂಪಾಂತರಿ ತಳಿ ಓಮೈಕ್ರಾನ್ ನಿಯಂತ್ರಣಕ್ಕೆ ಸರ್ಕಾರ ವಿವಿಧ ಕ್ರಮಗಳನ್ನು ಕೈಗೊಂಡಿದೆ.

ಬೆಂಗಳೂರಿಗೆ ಮತ್ತು ರಾಜ್ಯಕ್ಕೆ ಪ್ರತ್ಯೇಕ ಮಾರ್ಗಸೂಚಿಯನ್ನು ಸರ್ಕಾರ ಪ್ರಕಟಿಸಿದೆ.

ವೀಕೆಂಡ್ ಕರ್ಫ್ಯೂ ಮತ್ತು ನೈಟ್ ಕರ್ಫ್ಯೂ ಇರಲಿದ್ದು, ಅಗತ್ಯ ಸೇವೆಗೆ ಮಾತ್ರ ಅವಕಾಶವಿರಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.