ADVERTISEMENT

ಐವರು ಹೈಕೋರ್ಟ್ ನ್ಯಾಯಮೂರ್ತಿಗಳ ಪ್ರಮಾಣ ವಚನ ಸ್ವೀಕಾರ

​ಪ್ರಜಾವಾಣಿ ವಾರ್ತೆ
Published 4 ಮೇ 2020, 20:15 IST
Last Updated 4 ಮೇ 2020, 20:15 IST
ಹೈಕೋರ್ಟ್‌ಗೆ ನೂತನ ನ್ಯಾಯಮೂರ್ತಿಗಳಾಗಿ ಪ್ರಮಾಣ ವಚನ ಸ್ವೀಕರಿಸಿದವರ ಜೊತೆ ಕರ್ನಾಟಕ ವಕೀಲರ ಪರಿಷತ್ ಅಧ್ಯಕ್ಷ ಜೆ.ಎಂ. ಅನಿಲ್ ಕುಮಾರ್ (ಎಡದಿಂದ ಬಲಕ್ಕೆ ಮೊದಲನೆಯವರು), ನ್ಯಾಯಮೂರ್ತಿ ಎಂ. ಗಣೇಶಯ್ಯ ಉಮಾ, ಸಂಜೀವಕುಮಾರ ಹಂಚಾಟೆ, ಪದ್ಮರಾಜ ನೇಮಚಂದ್ರ ದೇಸಾಯಿ, ವೇದವ್ಯಾಸಾಚಾರ ಶ್ರೀಶಾನಂದ, ಶಿವಶಂಕರ ಅಮರಣ್ಣವರ ಮತ್ತು ಬೆಂಗಳೂರು ವಕೀಲರ ಸಂಘದ ಅಧ್ಯಕ್ಷ ಎ.ಪಿ.ರಂಗನಾಥ್.

ಬೆಂಗಳೂರು: ರಾಜ್ಯ ಹೈಕೋರ್ಟ್‌ಗೆ ನೂತನವಾಗಿ ನೇಮಕಗೊಂಡ ಐವರು ಹೆಚ್ಚುವರಿ ನ್ಯಾಯಮೂರ್ತಿಗಳು ಸೋಮವಾರ ಪ್ರಮಾಣ ವಚನ ಸ್ವೀಕರಿಸಿದರು.

ಹೈಕೋರ್ಟ್‌ನಲ್ಲಿ ನಡೆದ ಸರಳ ಸಮಾರಂಭದಲ್ಲಿ ಮುಖ್ಯ ನ್ಯಾಯಮೂರ್ತಿ ಅಭಯ್ ಎಸ್.ಓಕಾ
ಪ್ರಮಾಣ ವಚನ ಬೋಧಿಸಿದರು.

ಪ್ರಮಾಣ ವಚನ ಸ್ವೀಕರಿಸಿದ ನ್ಯಾಯಮೂರ್ತಿಗಳು: ಶಿವಶಂಕರ ಅಮರಣ್ಣವರ, ಎಂ.ಗಣೇಶಯ್ಯ ಉಮಾ, ವೇದವ್ಯಾಸಾಚಾರ ಶ್ರೀಶಾನಂದ, ಹಂಚಾಟೆ ಸಂಜೀವಕುಮಾರ್ ಮತ್ತು ಪದ್ಮರಾಜ ನೇಮಚಂದ್ರ ದೇಸಾಯಿ.

ADVERTISEMENT

ಕಾರ್ಯಕ್ರಮದಲ್ಲಿ ಅಡ್ವೊಕೇಟ್ ಜನರಲ್ ಪ್ರಭುಲಿಂಗ ಕೆ. ನಾವದಗಿ, ಸಹಾಯಕ ಸಾಲಿಸಿಟರ್ ಜನರಲ್ ಸಿ. ಶಶಿಕಾಂತ್, ಕರ್ನಾಟಕ ವಕೀಲರ ಪರಿಷತ್ ಅಧ್ಯಕ್ಷ ಜೆ.ಎಂ. ಅನಿಲ್ ಕುಮಾರ್ ಮತ್ತು ಬೆಂಗಳೂರು ವಕೀಲರ ಸಂಘದ ಅಧ್ಯಕ್ಷ ಎ.ಪಿ.ರಂಗನಾಥ್ ಇದ್ದರು. ಕಟ್ಟುನಿಟ್ಟಾಗಿ ವ್ಯಕ್ತಿಗತ ಅಂತರ ಕಾಯ್ದುಕೊಳ್ಳಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.