ADVERTISEMENT

ಮೀಸಲಾತಿ ಪಟ್ಟಿ ಪರಿಷ್ಕರಣೆ: ತ್ವರಿತ ವರದಿಗೆ ಪಂಚಮಸಾಲಿ ಮಠಾಧೀಶರ ಒತ್ತಾಯ

​ಪ್ರಜಾವಾಣಿ ವಾರ್ತೆ
Published 14 ಜೂನ್ 2022, 8:00 IST
Last Updated 14 ಜೂನ್ 2022, 8:00 IST
ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಆಯೋಗದ ಅಧ್ಯಕ್ಷರಾದ ಜಯಪ್ರಕಾಶ್‌ ಹೆಗ್ಡೆ ಅವರಿಗೆ ಪಂಚಮಸಾಲಿ ಮೀಸಲಾತಿಯ ಕುರಿತು ಕೂಡಲೇ ವರದಿ ಸರಕಾರಕ್ಜೆ ನೀಡಲು ಮನವಿ ಸಲ್ಲಿಸಲಾಯಿತು.
ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಆಯೋಗದ ಅಧ್ಯಕ್ಷರಾದ ಜಯಪ್ರಕಾಶ್‌ ಹೆಗ್ಡೆ ಅವರಿಗೆ ಪಂಚಮಸಾಲಿ ಮೀಸಲಾತಿಯ ಕುರಿತು ಕೂಡಲೇ ವರದಿ ಸರಕಾರಕ್ಜೆ ನೀಡಲು ಮನವಿ ಸಲ್ಲಿಸಲಾಯಿತು.   

ಬೆಂಗಳೂರು: ಹಿಂದುಳಿದ ವರ್ಗಗಳ ಪ್ರವರ್ಗ-2ಎ ಪಟ್ಟಿಗೆ ಲಿಂಗಾಯತ ಪಂಚಮಸಾಲಿ ಸಮುದಾಯವನ್ನು ಸೇರಿಸಬೇಕೆಂಬ ಬೇಡಿಕೆ ಕುರಿತು ಅಧ್ಯಯನ ಪೂರ್ಣಗೊಳಿಸಿ ತ್ವರಿತವಾಗಿ ಸರ್ಕಾರಕ್ಕೆ ವರದಿ ನೀಡುವಂತೆ ಆಗ್ರಹಿಸಿ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಕೆ.ಜಯಪ್ರಕಾಶ್‌ ಹೆಗ್ಡೆ ಅವರಿಗೆ ಪಂಚಮಸಾಲಿ ಮಠಾಧೀಶರ ನಿಯೋಗ ಮಂಗಳವಾರ ಮನವಿ ಸಲ್ಲಿಸಿತು.

ಹರಿಹರ ಪಂಚಮಸಾಲಿ ಪೀಠದ ವಚನಾನಂದ ಸ್ವಾಮೀಜಿ ನೇತೃತ್ವದಲ್ಲಿ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರನ್ನು ಭೇಟಿಮಾಡಿದ ನಿಯೋಗ, ಲಿಂಗಾಯತ ಪಂಚಮಸಾಲಿ ಸಮುದಾಯ ಮತ್ತು ಅದರ ಉಪ ಪಂಗಡಗಳನ್ನು ಹಿಂದುಳಿದ ವರ್ಗಗಳ ಪ್ರವರ್ಗ 2-ಎ ಪಟ್ಟಿಗೆ ಸೇರಿಸುವ ಬೇಡಿಕೆ ಕುರಿತು ಅಧ್ಯಯನ ನಡೆಸಿ ವರದಿ ನೀಡುವಂತೆ ರಾಜ್ಯ ಸರ್ಕಾರ ಆಯೋಗಕ್ಕೆ ಸೂಚಿಸಿದೆ. ಅಧ್ಯಯನ ನಡೆಸಿ ವರದಿ ಸಲ್ಲಿಸುವುದು ವಿಳಂಬವಾಗುತ್ತಿದ್ದು, ಇದರಿಂದ ಸಮುದಾಯಕ್ಕೆ ತೊಂದರೆ ಆಗುತ್ತಿದೆ. ತಕ್ಷಣವೇ ಅಧ್ಯಯನ ಪೂರ್ಣಗೊಳಿಸಿ ವರದಿ ಸಲ್ಲಿಸಬೇಕು ಎಂದು ಒತ್ತಾಯಿಸಿತು.

ಮೀಸಲಾತಿ ಪಟ್ಟಿ ಪರಿಷ್ಕರಣೆ ವಿಳಂಬ ಆದಷ್ಟೂ ಲಿಂಗಾಯತ ಪಂಚಮಸಾಲಿ ಸಮುದಾಯದ ಜನರಿಗೆ ಶೈಕ್ಷಣಿಕ ಮತ್ತು ಔದ್ಯೋಗಿಕವಾಗಿ ಅನ್ಯಾಯವಾಗುತ್ತದೆ. ಅಂತಹದ್ದಕ್ಕೆ ಆಯೋಗ ಅವಕಾಶ ನೀಡಬಾರದು. ತ್ವರಿತವಾಗಿ ವರದಿ ಸಲ್ಲಿಸುವ ಮೂಲಕ ಸಮುದಾಯದ ಹಿತರಕ್ಷಣೆಗೆ ಕ್ರಮ ಕೈಗೊಳ್ಳಬೇಕು ಎಂದು ಸ್ವಾಮೀಜಿ ಆಗ್ರಹಿಸಿದರು.

ADVERTISEMENT

ಆಯೋಗದ ಅಧ್ಯಕ್ಷರು ಮತ್ತು ಸದಸ್ಯರನ್ನು ಭೇಟಿಮಾಡಿ ಮನವಿ ಸಲ್ಲಿಸಿದ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ವಚನಾನಂದ ಸ್ವಾಮೀಜಿ, ಈಗಾಗಲೇ ಹಲವು ಜಿಲ್ಲೆಗಳಲ್ಲಿ ಅಧ್ಯಯನ ಪೂರ್ಣಗೊಂಡಿದ್ದು, ಕೆಲವು ಜಿಲ್ಲೆಗಳಲ್ಲಿ ಬಾಕಿ ಇದೆ ಎಂಬ ಮಾಹಿತಿಯನ್ನು ಅಯೋಗದ ಅಧ್ಯಕ್ಷರು ಹಂಚಿಕೊಂಡಿದ್ದಾರೆ. ಅತಿ ಶೀಘ್ರದಲ್ಲಿ ವರದಿ ಸಲ್ಲಿಸುವುದಾಗಿಯೂ ಭರವಸೆ ನೀಡಿದ್ದಾರೆ ಎಂದರು.

ಜಮಖಂಡಿ ಪಂಚಮಸಾಲಿ ಪೀಠದ ಮಹಾದೇವ ಶಿವಾಚಾರ್ಯ ಸ್ವಾಮೀಜಿ, ಕರ್ನಾಟಕ ರಾಜ್ಯ ವೀರಶೈವ ಪಂಚಮಸಾಇ ಸಂಘದ ಅಧ್ಯಕ್ಷ ಬಿ. ನಾಗನಗೌಡ, ಕಾನೂನು ಘಟಕದ ಅದಸ್ಯ ಬಿ.ಎಸ್‌. ಪಾಟೀಲ್‌, ಕಾರ್ಯಾಧ್ಯಕ್ಷ ಸೋಮನಗೌಡ ಪಾಟೀಲ ನಿಯೋಗದಲ್ಲಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.