ಸಿದ್ದರಾಮಯ್ಯ
ಬೆಂಗಳೂರು: ದೇಶದಲ್ಲಿ ಇತರ ಹಿಂದುಳಿದ ಜಾತಿ (ಒಬಿಸಿ) ಪಟ್ಟಿಯಲ್ಲಿರುವ ಸಮುದಾಯಗಳು ಎದುರಿಸುತ್ತಿರುವ ವಿವಿಧ ಸಮಸ್ಯೆಗಳನ್ನು ಕೂಲಂಕಷವಾಗಿ ಪರಿಶೀಲಿಸಿ ಪರಿಹಾರ ಒದಗಿಸುವ ಉದ್ದೇಶದಿಂದ ಎಐಸಿಸಿ ರಚಿಸಿರುವ ಒಬಿಸಿ ಸಲಹಾ ಮಂಡಳಿಯ ಸದಸ್ಯರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡಾ ಒಬ್ಬರು ಎಂದು ಮುಖ್ಯಮಂತ್ರಿ ಸಚಿವಾಲಯ ಸ್ಪಷ್ಟನೆ ನೀಡಿದೆ.
ಸಲಹಾ ಮಂಡಳಿಯ ಸಭೆ ಇದೇ 15ರಂದು ಎಐಸಿಸಿ ಹಿಂದುಳಿದ ವರ್ಗಗಳ ವಿಭಾಗದ ಅಧ್ಯಕ್ಷರಾದ ಡಾ. ಅನಿಲ್ ಜೈಹಿಂದ್ ಅವರ ಅಧ್ಯಕ್ಷತೆಯಲ್ಲಿ ಬೆಂಗಳೂರಿನಲ್ಲಿ ನಡೆಯಲಿದೆ. ಸಭೆಯ ಆತಿಥ್ಯವನ್ನು ಮುಖ್ಯಮಂತ್ರಿ ವಹಿಸಿಕೊಂಡಿದ್ದಾರೆ.
ಕೆಪಿಸಿಸಿ ಕಚೇರಿಯ ಭಾರತ್ ಜೋಡೊ ಭವನದಲ್ಲಿ ಈ ಸಭೆ ನಡೆಯಲಿದೆ. ವಿವಿಧ ರಾಜ್ಯಗಳ ಪಕ್ಷದ ಮಾಜಿ ಮುಖ್ಯಮಂತ್ರಿಗಳು, ಹಾಲಿ ಮತ್ತು ಮಾಜಿ ಸಂಸದರು, ಶಾಸಕರು ಸೇರಿದಂತೆ 50 ಮಂದಿ ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದೂ ಸಚಿವಾಲಯ ತಿಳಿಸಿದೆ.
ಮಂಡಳಿ ಅಧ್ಯಕ್ಷರಾಗಿ ಸಿದ್ದರಾಮಯ್ಯ ಅವರು ನೇಮಕಗೊಂಡಿದ್ದಾರೆ ಎನ್ನುವುದ ಸರಿಯಲ್ಲ. ಅಂತಹ ಯಾವುದೇ ನೇಮಕಾತಿ ಆಗಿಲ್ಲ ಎಂದು ಸಚಿವಾಲಯ ವಿವರಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.