ADVERTISEMENT

ರಾಜ್ಯ ನಾಗರಿಕ ಸೇವಾ ಹುದ್ದೆಗಳಿಗೆ ಒಬಿಸಿ ಪ್ರಮಾಣ ಪತ್ರ ಕಡ್ಡಾಯ ಬೇಡ: ಸಿಎಂ ಸೂಚನೆ

​ಪ್ರಜಾವಾಣಿ ವಾರ್ತೆ
Published 31 ಅಕ್ಟೋಬರ್ 2023, 14:56 IST
Last Updated 31 ಅಕ್ಟೋಬರ್ 2023, 14:56 IST
<div class="paragraphs"><p>ಮುಖ್ಯಮಂತ್ರಿ ಸಿದ್ದರಾಮಯ್ಯ</p></div>

ಮುಖ್ಯಮಂತ್ರಿ ಸಿದ್ದರಾಮಯ್ಯ

   

ಬೆಂಗಳೂರು: ರಾಜ್ಯ ನಾಗರಿಕ ಸೇವಾ ಹುದ್ದೆಗಳಿಗೆ ಮೀಸಲಾತಿಯಿಂದ ಯಾವುದೇ ರಿಯಾಯಿತಿ ಪಡೆಯದೇ ಅಂತಿಮ ಆಯ್ಕೆ ಪಟ್ಟಿಯಲ್ಲಿ ಸಾಮಾನ್ಯ ವರ್ಗದ ಹುದ್ದೆಗಳಿಗೆ ಆಯ್ಕೆಗೊಂಡ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ಸಿಂಧುತ್ವ ಪ್ರಮಾಣ ಪತ್ರ ಕಡ್ಡಾಯಗೊಳಿಸದಂತೆ ಸಂಬಂಧಪಟ್ಟ ಇಲಾಖಾ ಮುಖ್ಯಸ್ಥರಿಗೆ ನಿರ್ದೇಶನ ನೀಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದ್ದಾರೆ.

ಈ ಸಂಬಂಧ ಅವರು ಸರ್ಕಾರದ ಮುಖ್ಯ ಕಾರ್ಯದರ್ಶಿಯವರಿಗೆ ಪತ್ರ ಬರೆದಿದ್ದಾರೆ.

ADVERTISEMENT

ಮೀಸಲಾತಿ ಕೋರಿ ಸರ್ಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಅಂತಿಮ ಆಯ್ಕೆ ಪಟ್ಟಿಯಲ್ಲಿ ಸಾಮಾನ್ಯ ವರ್ಗದ ಹುದ್ದೆಗಳಿಗೆ ಎದುರಾಗಿ ಆಯ್ಕೆಗೊಂಡಾಗಲೂ ಸಿಂಧುತ್ವ ಪ್ರಮಾಣ ಪತ್ರ ಸಲ್ಲಿಸುವಂತೆ ಕೆಲವು ಪ್ರಾಧಿಕಾರಿಗಳು ಅಭ್ಯರ್ಥಿಗಳಿಗೆ ಸೂಚಿಸುತ್ತಿವೆ. ಇದರಿಂದ ಅಂತಿಮ ಆಯ್ಕೆ ಪಟ್ಟಿಯಲ್ಲಿ ಮೆರಿಟ್‌ ಆಧಾರದಲ್ಲಿ ಸಾಮಾನ್ಯವರ್ಗದ ಹುದ್ದೆಗಳಿಗೆ ಎದುರಾಗಿ ಆಯ್ಕೆಯಾದ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ಅನಾವಶ್ಯಕ ತೊಂದರೆ ಆಗುತ್ತಿದೆ ಎಂಬ ದೂರು ಬಂದಿದೆ ಎಂದು ಹೇಳಿದ್ದಾರೆ.

ಕರ್ನಾಟಕ ಅನುಸೂಚಿತ ಜಾತಿಗಳು, ಅನುಸೂಚಿತ ಬುಡಕಟ್ಟುಗಳು ಮತ್ತು ಇತರೆ ಹಿಂದುಳಿದ ವರ್ಗಗಳ ನೇಮಕಾತಿ ನಿಯಮ 1992 ರ ಅನ್ವಯ ರಾಜ್ಯ ನಾಗರಿಕ ಸೇವಾ ಹುದ್ದೆಗಳಿಗೆ ನೇರ ನೇಮಕಾತಿ ಮೂಲಕ ಆಯ್ಕೆಗೊಳ್ಳುವ ಹಿಂದುಳಿದ ವರ್ಗಗಳ ಅಭ್ಯರ್ಥಿಗಳು ಅಂತಿಮ ಆಯ್ಕೆ ಪಟ್ಟಿಯಲ್ಲಿ ವಿವಿಧ ಮೀಸಲಾತಿಯಡಿ ಆಯ್ಕೆ ಹೊಂದುವ ಮತ್ತು ಮೀಸಲಾತಿಯಿಂದ ರಿಯಾಯಿತಿ ಪಡೆಯುವ ಅಭ್ಯರ್ಥಿಗಳು ಸಲ್ಲಿಸಿರುವ ಪ್ರಮಾಣ ಪತ್ರಗಳು ಸಿಂಧುವೇ ಎಂಬ ಬಗ್ಗೆ ಸಂಬಂಧಪಟ್ಟ ಪ್ರಾಧಿಕಾರದಿಂದ ಸಿಂಧುತ್ವ ಪ್ರಮಾಣ ಪತ್ರ ಪಡೆಯಬೇಕಾಗುತ್ತಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.