ADVERTISEMENT

ಕೋವಿಡ್‌ ನಿಯಂತ್ರಿಸಲು ಮುಂದಾಗಿ: ಜಿಲ್ಲಾ ಸಚಿವರಿಗೆ ಮುಖ್ಯಮಂತ್ರಿ ಸೂಚನೆ

​ಪ್ರಜಾವಾಣಿ ವಾರ್ತೆ
Published 21 ಏಪ್ರಿಲ್ 2021, 11:26 IST
Last Updated 21 ಏಪ್ರಿಲ್ 2021, 11:26 IST
ಬಿ.ಎಸ್‌.ಯಡಿಯೂರಪ್ಪ
ಬಿ.ಎಸ್‌.ಯಡಿಯೂರಪ್ಪ   

ಬೆಂಗಳೂರು: ಎಲ್ಲ ಜಿಲ್ಲಾ ಉಸ್ತುವಾರಿ ಸಚಿವರು ಸಂಬಂಧಪಟ್ಟ ಜಿಲ್ಲೆಗಳಲ್ಲಿ ಕೊರೋನಾ ವೈರಾಣು ಹರಡುವುದನ್ನು ತಡೆಗಟ್ಟಲು ಕೂಡಲೇ ಕಾರ್ಯಪ್ರವೃತ್ತರಾಗಬೇಕು ಎಂದು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ಸೂಚಿಸಿದ್ದಾರೆ.

ಕೋವಿಡ್‌ ನಿಯಂತ್ರಣದಲ್ಲಿ ಜಿಲ್ಲಾಡಳಿತಕ್ಕೆ ಸಹಕಾರ ನೀಡಬೇಕು. ಸಾರ್ವಜನಿಕರಿಗೆ ಮುನ್ನೆಚ್ಚರಿಕೆ ನೀಡಬೇಕು. ಸೋಂಕಿತರಿಗೆ ಅಗತ್ಯ ವೈದ್ಯಕೀಯ ಸೌಲಭ್ಯವನ್ನು ಕೊಡಿಸಲು ತ್ವರಿತ ಕ್ರಮ ಕೈಗೊಂಡು ಪರಿಸ್ಥಿತಿ ಉಲ್ಬಣಿಸದಂತೆ ಕ್ರಮ ತೆಗೆದುಕೊಳ್ಳಬೇಕು ಎಂದು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT