ADVERTISEMENT

ಅತ್ಯಗತ್ಯ ಸೇವೆ | ಅಧಿಕಾರಿ, ಸಿಬ್ಬಂದಿ ಕಡ್ಡಾಯ ಹಾಜರಿ: ರಾಜ್ಯ ಸರ್ಕಾರ ಆದೇಶ

​ಪ್ರಜಾವಾಣಿ ವಾರ್ತೆ
Published 10 ಮೇ 2021, 16:45 IST
Last Updated 10 ಮೇ 2021, 16:45 IST

ಬೆಂಗಳೂರು: ಅತ್ಯಗತ್ಯ ಸೇವೆಗಳನ್ನು ಒದಗಿಸುವ ಏಳು ಇಲಾಖೆಗಳ ಎಲ್ಲ ವರ್ಗದ ಅಧಿಕಾರಿ, ಸಿಬ್ಬಂದಿ ಕರ್ತವ್ಯಕ್ಕೆ ಹಾಜರಾಗಬೇಕು. ಇತರ ಇಲಾಖೆಗಳ ಅಧಿಕಾರಿ, ಸಿಬ್ಬಂದಿ ಶೇ 50ರಂತೆ ಪಾಳಿಯಲ್ಲಿ ಹಾಜರಾಗಬೇಕು ಎಂದು ರಾಜ್ಯ ಸರ್ಕಾರ ಸೋಮವಾರ
ಆದೇಶಿಸಿದೆ.

ಸಚಿವಾಲಯದಲ್ಲಿ ಅತ್ಯಗತ್ಯ ಸೇವೆಗಳನ್ನು ಒದಗಿಸುತ್ತಿರುವ ಆರೋಗ್ಯ, ವೈದ್ಯಕೀಯ ಶಿಕ್ಷಣ, ಒಳಾಡಳಿತ, ಕಂದಾಯ, ಕಾರ್ಮಿಕ ಇಲಾಖೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್‌ ಮತ್ತು ಕ್ಕಳ ರಕ್ಷಣಾ ಸೇವೆಗಳನ್ನು ಒದಗಿಸುತ್ತಿರುವ ಮಕ್ಕಳ ರಕ್ಷಣಾ ನಿರ್ದೇಶನಾಲಯದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅಧಿಕಾರಿ, ಸಿಬ್ಬಂದಿ ಕರ್ತವ್ಯಕ್ಕೆ ಹಾಜರಾಗುವಂತೆ ಸುತ್ತೋಲೆಯಲ್ಲಿ
ತಿಳಿಸಲಾಗಿದೆ.

ಉಳಿದಂತೆ, ನಗರಾಭಿವೃದ್ಧಿ, ಆಹಾರ, ಇಂಧನ, ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ, ಆರ್ಥಿಕ, ಪಶುಸಂಗೋಪನೆ ಮತ್ತು ಮೀನುಗಾರಿಕೆ, ಕೃಷಿ, ತೋಟಗಾರಿಕೆ, ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅಧಿಕಾರಿ, ಸಿಬ್ಬಂದಿ ಶೇ 50ರಂತೆ ರೊಟೇಷನ್ ಆಧಾರದಲ್ಲಿ ಹಾಜರಾಗಬೇಕು. ಇದೇ 23ರವರೆಗೆ ಈ ಆದೇಶ ಜಾರಿಯಲ್ಲಿ ಇರಲಿದೆ ಎಂದೂ ತಿಳಿಸಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.