ADVERTISEMENT

ಜಾತಿ ಜನಗಣತಿಗೆ ವಿರೋಧ: ರಾಜ್ಯದಾದ್ಯಂತ ಹೋರಾಟಕ್ಕೆ ಒಕ್ಕಲಿಗರ ಸಂಘ‌ ನಿರ್ಧಾರ

​ಪ್ರಜಾವಾಣಿ ವಾರ್ತೆ
Published 15 ಏಪ್ರಿಲ್ 2025, 10:29 IST
Last Updated 15 ಏಪ್ರಿಲ್ 2025, 10:29 IST
   

ಬೆಂಗಳೂರು: ಜನಗಣತಿ ವಿರೋಧಿಸಿ ರಾಜ್ಯದಾದ್ಯಂತ ಹೋರಾಟ ನಡೆಸಲು ರಾಜ್ಯ ಒಕ್ಕಲಿಗರ ಸಂಘ ನಿರ್ಧರಿಸಿದ್ದು, ಏ.17ರ ನಂತರ ಹೋರಾಟದ ರೂಪುರೇಷೆಗಳ ಬಗ್ಗೆ ತೀರ್ಮಾನ ಕೈಗೊಳ್ಳಲಿದೆ.

'ಅನ್ಯಾಯಕ್ಕೆ ಒಳಗಾಗಿರುವ ಲಿಂಗಾಯತ, ಬ್ರಾಹ್ಮಣ ಸೇರಿ ಇತರ ಸಮುದಾಯಗಳನ್ನು ಒಟ್ಟುಗೂಡಿಸಿ ರಾಜ್ಯವನ್ನೇ ಬಂದ್ ಆಗುವ ರೀತಿಯಲ್ಲಿ ಹೋರಾಟ ಮಾಡುವುದಾಗಿ ಒಕ್ಕಲಿಗ ಸಂಘದ ಅಧ್ಯಕ್ಷರು ಸೇರಿದಂತೆ ಎಲ್ಲ ನಿರ್ದೇಶಕರು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

'ವರದಿ ಜಾರಿಯಾದರೆ ಸರ್ಕಾರ ಬೀಳಿಸುವ ಶಕ್ತಿ ನಮ್ಮ ಸಮುದಾಯಕ್ಕಿದೆ. ಜನಾಂಗಕ್ಕೆ ಅನ್ಯಾಯವಾದರೆ ಸಂಘದ ಎಲ್ಲ ನಿರ್ದೇಶಕರು ರಾಜೀನಾಮೆ ಕೊಟ್ಟು ಬೀದಿಗೆ ಇಳಿಯುತ್ತೇವೆ' ಎಂದು ಎಚ್ಚರಿಸಿದರು.

ADVERTISEMENT

'ಇದು ಅವೈಜ್ಞಾನಿಕ ವರದಿಯಾಗಿದೆ. ಸಿದ್ದರಾಮಯ್ಯನವರಿಗಾಗಿ ತಯಾರಿಸಿದ ವರದಿಯಾಗಿದೆ. ಯಾವುದೇ ಕಾರಣಕ್ಕೂ ಈ ವರದಿಯನ್ನು ನಮ್ಮ ಸಂಘ ಒಪ್ಪುವುದಿಲ್ಲ' ಎಂದರು. ಸುದ್ದಿಗೊಷ್ಠಿಯಲ್ಲಿ ಸಂಘದ ಅಧ್ಯಕ್ಷ ಕೆಂಚಪ್ಪಗೌಡ, ಕಾರ್ಯದರ್ಶಿ ಕೋನಪ್ಪಗೌಡ ಸೇರಿದಂತೆ ಸಂಘದ ಎಲ್ಲ ನಿರ್ದೇಶಕರು ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.